ಸಾರಾಂಶ
ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ, ತೆರೆದ ಬಾವಿ, ಕಾಲುಸಂಕ ಹಾಗೂ ಗೋಕಟ್ಟೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆಬಾವಿಗಳಿಗೆ ಬಿಲ್ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ. ಈ ಕಾರಣಕ್ಕೆ ಹೊಸ ಕೊಳವೆಬಾವಿ ಕೊರೆಸಲು ಸಾಧ್ಯವಾಗಿಲ್ಲ. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರದ ಗಮನಕ್ಕೆ ವಿಷಯ ತಂದು ಮನವಿ ಮಾಡಿದರು. ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಮಾತನಾಡಿದರು. ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರಕುಮಾರ್ ಮತ್ತಿತರರು ಇದ್ದರು.
ಹೊಸನಗರ: ಮುಂದಿನ ದಿನಗಳಲ್ಲಿ ಬರುವ ಭೀಕರ ಬರಗಾಲಕ್ಕೆ ಈಗಲೇ ಸಜ್ಜಾಗಬೇಕು. ಕುಡಿಯುವ ನೀರಿಗೆ, ಜಾನುವಾರುಗಳಿಗೆ ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಾಕೀತು ಮಾಡಿದರು.
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತಂತೆ ತಾಲೂಕುಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿ, ಟ್ಯಾಂಕರ್‌ಗಳ ಮೂಲಕ ನೀರು ಸರಬಾರಜು ಮಾಡುವ ಬದಲು, ಹೆಚ್ಚಿನ ಸಂಖ್ಯೆಯಲ್ಲಿ ಬೋರ್‌ವೆಲ್‌ಗಳನ್ನು ಕೊರೆದು ಜನರಿಗೆ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೋಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.ಖಾಸಗಿ ಜಮೀನು, ಮನೆಗಳಲ್ಲಿ ಕೊರೆದಿರುವ ಬೋರ್‌ವೆಲ್‌ಗಳಲ್ಲಿ ಕುಡಿಯವ ನೀರು ಕೇಳಿರಿ. ಮಾನವೀಯ ದೃಷ್ಟಿಯಿಂದ ಕೊಡಬಹುದು. ಜಾನುವಾರುವಳಿಗೆ ಮೇವಿನ ಕೊರತೆ ಆಗದಂತೆ ನೋಡಿಕೊಳ್ಳಿರಿ. ಜಾನುವಾರು, ಪ್ರಾಣಿ, ಪಕ್ಷಿಗಳಿಗೂ ನೀರು ಕೊರಕುವಂತೆ ಮಾಡಲು ಅವರು ಕೋರಿದರು.
ಗ್ರಾಮ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ, ತೆರೆದ ಬಾವಿ, ಕಾಲುಸಂಕ ಹಾಗೂ ಗೋಕಟ್ಟೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆಬಾವಿಗಳಿಗೆ ಬಿಲ್ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ. ಈ ಕಾರಣಕ್ಕೆ ಹೊಸ ಕೊಳವೆಬಾವಿ ಕೊರೆಸಲು ಸಾಧ್ಯವಾಗಿಲ್ಲ. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸರ್ಕಾರದ ಗಮನಕ್ಕೆ ವಿಷಯ ತಂದು ಮನವಿ ಮಾಡಿದರು.ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಮಾತನಾಡಿದರು. ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರಕುಮಾರ್ ಮತ್ತಿತರರು ಇದ್ದರು.
ಶಾಸಕರ ಗೈರು:ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ನಡೆದ ಬರ ನಿರ್ವಹಣೆ ಸಭೆಗೆ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಆರಗ ಜ್ಞಾನೇಂದ್ರ ಗೈರಾಗಿದ್ದರು. ತಳಹಂತದ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.
- - - -1ಎಚ್‍ಒಎಸ್1ಪಿ: