ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬದ ರಕ್ಷಣೆ ಮಾಡಬಹುದು.
ಕುಷ್ಟಗಿ: ಆರೋಗ್ಯ ಸದೃಢವಾಗಿರಲು ಶುದ್ಧ ನೀರು ಸೇವಿಸಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯ ಮೇಲ್ವಿಚಾರಕ ಶಿವಾನಂದ ಅಕ್ಕಿ ಹೇಳಿದರು.
ತಾಲೂಕಿನ ಸಂಗನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ)ವತಿಯಿಂದ ನಡೆದ ಶುದ್ಧ ಜಲ ಅಭಿಯಾನ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ನಾವು ಆರೋಗ್ಯವಾಗಿದ್ದರೆ ಮಾತ್ರ ನಮ್ಮ ಕುಟುಂಬದ ರಕ್ಷಣೆ ಮಾಡಬಹುದು. ಜತೆಗೆ ನಮ್ಮ ಕುಟುಂಬ ಆರ್ಥಿಕ ಸಬಲೀಕರಣ ಆಗುತ್ತದೆ ಕಲುಷಿತ ನೀರು ನಮಗೆ ಅನೇಕ ರೋಗ ರುಜಿನ ತರುತ್ತದೆ, ಇದರಿಂದ ನಮ್ಮ ಕುಟುಂಬಕ್ಕೆ ಆರ್ಥಿಕ ಹೊರೆ ಬೀಳುತ್ತದೆ ನಾವು ಕುಡಿಯುವ ನೀರು ಶುದ್ಧವಾಗಿರುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ಶುದ್ಧ ಕುಡಿಯುವ ನೀರು ಮತ್ತು ಗ್ರಾಮದ ಸ್ವಚ್ಛತಾ ಹಾಗೂ ನೈರ್ಮಲ್ಯ ಕಾಪಾಡುವಂತೆ ಊರಿನ ಪ್ರಮುಖ ಬೀದಿಯಲ್ಲಿ ಜಾಥಾ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಬಸವರಾಜ, ಶಿಕ್ಷಕ ಹನುಮಂತ ಸೇರಿದಂತೆ ಶಿಕ್ಷಕರು ವಿದ್ಯಾರ್ಥಿಗಳು ಅನೇಕರು ಇದ್ದರು.