ಸಾರಾಂಶ
ಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಸಿರಿ-ಜೀವಜಲ ಕುಡಿವ ನೀರಿನ ಘಟಕ ಆರಂಭ
ಕನ್ನಡಪ್ರಭ ವಾರ್ತೆ ತರೀಕೆರೆಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಇಲ್ಲಿ ಸೋಮವಾರ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್, ಸೃಷ್ಟಿ ಎಂಟರ್ ಪ್ರೈಸಸ್ ಅಜ್ಜಂಪುರ ಹಾಗೂ ಪುರಸಭೆ ತರೀಕೆರೆ ವತಿಯಿಂದ ಸಮೀಪದ ಹಳಿಯೂರು ಗ್ರಾಮದಲ್ಲಿ ನಿರ್ಮಿಸಿರುವ ಸಿರಿ-ಜೀವಜಲ ಕುಡಿಯುವ ನೀರಿನ ಘಟಕ ಉದ್ಘಾಟನೆ ನೆರವೇರಿಸಿ ನಂತರ ಏರ್ಪಾಡಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್, ಸೃಷ್ಟಿ ಎಂಟರ್ ಪ್ರೈಸಸ್ ಅಜ್ಜಂಪುರ ಇದೀಗ ಶುದ್ದ ಕುಡಿಯುವ ನೀರಿನ ಘಟಕ ನಿರ್ಮಿಸಿ, ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ನೆರವೇರಿಸಲಾಗಿದೆ, ಶುದ್ದ ಕುಡಿಯುವ ನೀರನ್ನು ಉಪಯೋಗಿಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಅಧ್ಯಕ್ಷ ವಸಂತಕುಮಾರ್ ಮಾತನಾಡಿ, ಈ ಹಿಂದೆ ಹಳಿಯೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಇತ್ತು, ಇದೀಗ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್, ಸೃಷ್ಟಿ ಎಂಟರ್ ಪ್ರೈಸಸ್ ಅಜ್ಜಂಪುರ, ಪುರಸಭೆ ಸದಸ್ಯ ಕುಮಾರಪ್ಪ ಅವರ ಪ್ರಯತ್ನದಿಂದ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿದೆ, ಶಾಸಕ ಜಿ.ಹೆಚ್.ಶ್ರೀನಿವಾಸ್ ಅವರು 54 ಕೋಟಿ ರು. ಅನುದಾನದಲ್ಲಿ ತರೀಕೆರೆ ಪಟ್ಟಣದಲ್ಲಿ 24X 7 ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಗೊಳ್ಳಲಿದೆ ಎಂದು ಹೇಳಿದರು.ಪುರಸಭೆ ಸದಸ್ಯ ಕುಮಾರಪ್ಪ ಮಾತನಾಡಿ, ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಕೊಟ್ಟ ಮಾತಿನಂತೆ ಹಳಿಯೂರು ಗ್ರಾಮಕ್ಕೆ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆಯನ್ನು ನೆರವೇರಿಸಿದ್ದಾರೆ, ವಾರ್ಡ್ ನಂ.2 ರ ಉಪ್ಪಾರ ಬಸವನಹಳ್ಳಿಯಲ್ಲಿ ಸಿ.ಸಿ.ರಸ್ತೆ ಹಾಗೂ ಅಂಗನವಾಡಿ, ಪಾಳ್ಳೆಗಾರ್ ಕ್ಯಾಂಪ್, ಹಳಿಯೂರಿನಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.
ಪುರಸಭೆ ಉಪಾಧ್ಯಕ್ಷೆ ಪಾರ್ವತಮ್ಮ, ಕೆಡಿಪಿ ಸದಸ್ಯ ಗಂಗಾಧರ್, ಗ್ರಾಮದ ಮುಖಂಡರಾದ ವಸಂತಕುಮಾರ್, ಮಲ್ಲಿಕಾರ್ಜುನ, ಲಕ್ಷ್ಮಣ್, ಪ್ರಸನ್ನಕುಮಾರ್, ಮದನ್, ಪುರಸಭೆ ವ್ಯವಸ್ಥಾಪಕ ವಿಜಯಕುಮಾರ್ ಮತ್ತಿತರರು ಭಾಗವಹಿಸಿದ್ದರು.