ಬೈಕಲ್ಲಿ ಟ್ರಿಪಲ್‌ ರೈಡಿಂಗ್‌ ವೇಳೆಯೇಮದ್ಯ ಸೇವಿಸಿ ಪುಂಡಾಟ: ವೈರಲ್‌

| Published : Aug 08 2024, 01:30 AM IST

ಬೈಕಲ್ಲಿ ಟ್ರಿಪಲ್‌ ರೈಡಿಂಗ್‌ ವೇಳೆಯೇಮದ್ಯ ಸೇವಿಸಿ ಪುಂಡಾಟ: ವೈರಲ್‌
Share this Article
  • FB
  • TW
  • Linkdin
  • Email

ಸಾರಾಂಶ

ಮೂವರು ಪುಂಡರು ದ್ವಿಚಕ್ರ ವಾಹನದಲ್ಲಿ ಟ್ರಿಪಲ್‌ ರೈಡಿಂಗ್‌ ಮಾಡುತಾ ಮದ್ಯ ಸೇವಿಸಿಕೊಂಡು ಪುಂಡಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಮೂವರು ಪುಂಡರು ದ್ವಿಚಕ್ರ ವಾಹನದಲ್ಲಿ ಟ್ರಿಪಲ್‌ ರೈಡಿಂಗ್‌ ಮಾಡುತಾ ಮದ್ಯ ಸೇವಿಸಿಕೊಂಡು ಪುಂಡಾಟ ಮೆರೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ನಗರದ ಎಂ.ಜಿ.ರಸ್ತೆ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂವರು ಯುವಕರು ಒಂದೇ ದ್ವಿಚಕ್ರ ವಾಹನದಲ್ಲಿ ಕುಳಿತು ಅಡ್ಡಾದಿಡ್ಡಿ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಕೈಯಲ್ಲಿ ಮದ್ಯದ ಬಾಟಲಿ ಹಾಗೂ ಲೋಟ ಹಿಡಿದುಕೊಂಡು ಮದ್ಯ ಸೇವಿಸುತ್ತಾ ದ್ವಿಚಕ್ರ ವಾಹನ ಚಾಲನೆ ಮಾಡಿದ್ದಾರೆ. ಕಾರೊಂದರ ಪ್ರಯಾಣಿಕರು ಮೊಬೈಲ್‌ನಲ್ಲಿ ಈ ಯುವಕರು ಪುಂಡಾಟವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ.

ಇದಕ್ಕೆ ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯಿಸಿರುವ ನಗರ ಪೊಲೀಸರು, ಈ ದೂರನ್ನು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ. ಈ ಸಂಬಂಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಈಗಾಗಲೇ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ವಿಡಿಯೋದಲ್ಲಿರುವ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಆಧರಿಸಿ ಪುಂಡರ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ.