ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ವಿಧಾನಸೌಧದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಕ್ಷೇತ್ರದ ಗ್ರಾಮೀಣ ಭಾಗದ ಜನಸಾಮಾನ್ಯರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಬೈಂದೂರು : ಬೈಂದೂರು ಶಾಸಕ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ವಿಧಾನಸೌಧದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಕ್ಷೇತ್ರದ ಗ್ರಾಮೀಣ ಭಾಗದ ಜನಸಾಮಾನ್ಯರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ಕ್ಷೇತ್ರದಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಕುಡಿಯುವ ನೀರಿನ ಸಂಬಂಧ ಜನರು ಅನುಭವಿಸುತ್ತಿರುವ ಸಂಕಷ್ಟಗಳ ಬಗ್ಗೆ ಸಚಿವರ ಗಮನ ಸಳೆದ ಶಾಸಕರು, ಪ್ರತಿ ಗ್ರಾಪಂಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ 5 ಲಕ್ಷ ರು. ಹಾಗೂ ಇನ್ನಿತರೆ ಆಡಳಿತಾತ್ಮಕ ಖರ್ಚು ಮತ್ತು ಮೂಲ ಸೌಕರ್ಯಗಳ ಅಭಿವೃದ್ಧಿಗೆ ತಲಾ 25 ಲಕ್ಷ ರು. ಬಿಡುಗಡೆ ಮಾಡುವಂತೆ ಶಾಸಕರು ಮನವಿ ಮಾಡಿದರು.

ಕಾಮಗಾರಿ ಪೂರ್ಣ ಒತ್ತಾಯ: ಅಲ್ಲದೇ ಗ್ರಾಮೀಣ ರಸ್ತೆಗಳ ತುರ್ತು ಅಭಿವೃದ್ಧಿಗೆ ಅನುದಾನ ನೀಡುವಂತೆ, ಗ್ರಾಮೀಣ ವಸತಿ ಯೋಜನೆಗಳಡಿ ಮನೆಗಳ ಹಂಚಿಕೆ ಮಾಡುವಂತೆ, ಜೆಜೆಎಂ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಮತ್ತು ಜಮೀನಿನ ನಮೂನೆ 9 ಹಾಗೂ ನಮೂನೆ 11 ಪಡೆಯುವಲ್ಲಿ ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಿಸುವಂತೆ ಶಾಸಕರು ಆಗ್ರಹಿಸಿದರು. ಶಾಸಕರ ಬೇಡಿಕೆಗಳನ್ನು ಸಹಾನುಭೂತಿಯಿಂದ ಆಲಿಸಿದ ಸಚಿವರು, ಅನುದಾನದ ಹಂಚಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.