ರಾಮನಗರ: ಬೇಸಿಗೆ ಧಗೆ ಹೆಚ್ಚಾಗಿ ಕುಡಿಯುವ ನೀರಿನ ಮೂಲಗಳು ಬತ್ತುತ್ತಿವೆ. ಜಿಲ್ಲೆಯಲ್ಲಿ ಸದ್ಯಕ್ಕೆ 52 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಬೇಸಿಗೆ ಆಗಮನದೊಂದಿಗೆ ನೀರಿನ ಸಮಸ್ಯೆ ಜಿಲ್ಲೆಯನ್ನು ದಿನ ಕಳೆದಂತೆ ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ನೀರಿನ ಸೆಲೆಗಳು ಬರಿದಾಗುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಅಭಾವ ಮತ್ತಷ್ಟು ಹೆಚ್ಚಳವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ
ರಾಮನಗರ: ಬೇಸಿಗೆ ಧಗೆ ಹೆಚ್ಚಾಗಿ ಕುಡಿಯುವ ನೀರಿನ ಮೂಲಗಳು ಬತ್ತುತ್ತಿವೆ. ಜಿಲ್ಲೆಯಲ್ಲಿ ಸದ್ಯಕ್ಕೆ 52 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಬೇಸಿಗೆ ಆಗಮನದೊಂದಿಗೆ ನೀರಿನ ಸಮಸ್ಯೆ ಜಿಲ್ಲೆಯನ್ನು ದಿನ ಕಳೆದಂತೆ ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಈಗಾಗಲೇ ನೀರಿನ ಸೆಲೆಗಳು ಬರಿದಾಗುತ್ತಿದ್ದು, ಮುಂದಿನ ದಿನಗಳಲ್ಲಿ ನೀರಿನ ಅಭಾವ ಮತ್ತಷ್ಟು ಹೆಚ್ಚಳವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ.
ಏಪ್ರಿಲ್‍ನ ಎರಡನೇ ವಾರಕ್ಕೆ ಜಿಲ್ಲೆಯ 52 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಈ ಪರಿಣಾಮ ಮತ್ತಷ್ಟು ಹೆಚ್ಚಾಗುವ ಎಲ್ಲಾ ಸೂಚನೆ ಗೋಚರಿಸುತ್ತಿದೆ. ರಾಮನಗರ ಮತ್ತು ಮಾಗಡಿ ತಾಲೂಕಿನಲ್ಲಿಯೇ ಹೆಚ್ಚು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ.ಜಲಸಂಪನ್ಮೂಲ ಸಚಿವ ಹಾಗೂ ಉಪಮುಖ್ಯಮಂತ್ರಿ ಆಗಿರುವ ಡಿ.ಕೆ. ಶಿವಕುಮಾರ್ ಕ್ಷೇತ್ರ ಕನಕಪುರ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಸ್ವಲ್ಪ ಮಟ್ಟಿದೆ ಸುಧಾರಿಸಿದೆ.
ಕಳೆದ ವರ್ಷ ಉಂಟಾಗಿದ್ದ ಬರದಿಂದ ಈ ಬಾರಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಮಾಡಿದೆ. ಜತೆಗೆ, ಕಳೆದ ವರ್ಷದಲ್ಲಿನ ಮಳೆ ಕೊರತೆ ಅದರಲ್ಲೂ ರಾಮನಗರ, ಮಾಗಡಿ ಹಾಗೂ ಕನಕಪುರ ತಾಲೂಕಿನಲ್ಲಿ ಮಳೆ ಕಡಿಮೆಯಾಗಿತ್ತು. ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಅಂತ್ಯದೊಳಗೆ ಈ ಮೂರು ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಹಲವು ಕೆರೆಗಳು ಬರಿದಾಗಿ ನೀರಿನ ಸಮಸ್ಯೆ ಹೆಚ್ಚಳವಾಗುವಂತೆ ಮಾಡಿದೆ.ಗ್ರಾಮಗಳಿಗೆ ಟ್ಯಾಂಕರ್ ನೀರಿನ ವ್ಯವಸ್ಥೆ:
ಜಿಲ್ಲೆಯಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆ ಬಗೆಹರಿಸಲು ಜಿಲ್ಲಾ ಪಂಚಾಯಿತಿ ಆಯಾಯ ಗ್ರಾಮ ಪಂಚಾಯಿತಿ ವತಿಯಿಂದ ಪ್ರತ್ಯೇಕವಾಗಿ ಟ್ಯಾಂಕರ್ ವ್ಯವಸ್ಥೆ ಮಾಡುತ್ತಿದೆ. ಕೆಲವು ಕಡೆಯಲ್ಲಿ ಖಾಸಗಿ ಬೋರ್ ವೆಲ್ ಗಳನ್ನು ಪಡೆದು, ಜನರಿಗೆ ಕುಡಿಯುವ ನೀರನ್ನು ಪೂರೈಕೆ ಮಾಡುವ ಕೆಲಸ ಮಾಡಲಾಗುತ್ತಿದೆ.ಖಾಸಗಿ ಟ್ಯಾಂಕರ್ ಮೂಲಕ ಪ್ರತಿ ದಿನ 3 ಟ್ರಿಪ್ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಚನ್ನಪಟ್ಟಣ ತಾಲೂಕಿನ 4 ಗ್ರಾಮ ಪಂಚಾಯಿತಿಗಳ 5 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದೆ. ಹಾರೋಹಳ್ಳಿ ತಾಲೂಕಿನ 3 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ನೀರಿನ ಸಮಸ್ಯೆಯಿದ್ದು, ಅಲ್ಲಿಗೆ ಖಾಸಗಿ ಬೋರ್ ವೆಲ್ ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಕನಕಪುರ ತಾಲೂಕಿನ 7 ಗ್ರಾಮ ಪಂಚಾಯಿತಿಗಳ ಕೆಲ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತಲೆದೂರಿದ್ದು, 2 ಗ್ರಾಮಗಳಿಗೆ ಟ್ಯಾಂಕರ್, 11 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಗಳಿಂದ ನೀರು ಪೂರೈಸಲಾಗುತ್ತಿದೆ.ಇನ್ನು ಮಾಗಡಿ ತಾಲೂಕಿನ 8 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 9 ಗ್ರಾಮಗಳಿಗೆ ಟ್ಯಾಂಕರ್ , 10 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಗಳಿಂದ ಹಾಗೂ ರಾಮನಗರ ತಾಲೂಕಿನ 6 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ 6 ಗ್ರಾಮಗಳಿಗೆ ಟ್ಯಾಂಕರ್, 4 ಗ್ರಾಮಗಳಿಗೆ ಖಾಸಗಿ ಬೋರ್ ವೆಲ್ ಗಳಿಂದ ಪೂರೈಕೆ ಮಾಡಲಾಗುತ್ತಿದೆ.
ನೀರಿನ ಅಭಾವ ಇರುವ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ 18 ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಚನ್ನಪಟ್ಟಣ ಮತ್ತು ಹಾರೋಹಳ್ಳಿ ತಾಲೂಕುಗಳಲ್ಲಿ ಟ್ಯಾಂಕರ್ ಮೂಲಕ ನೀರು ಮಾಡಲಾಗುತ್ತಿಲ್ಲ. ಬದಲಿಗೆ ಖಾಸಗಿ ಕೊಳವೆ ಬಾವಿ ಪಡೆದು, ಗ್ರಾಮಗಳಲ್ಲಿ ನೀರುಪೂರೈಕೆ ಮಾಡಲಾಗುತ್ತಿದೆ.35 ಕೊಳವೆ ಬಾವಿಗಳ ಬಳಕೆ :
ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಆಯಾಯ ಗ್ರಾಮ ಪಂಚಾಯಿತಿಗಳ ಮೂಲಕ ಖಾಸಗಿ ಕೊಳವೆ ಬಾವಿಗಳನ್ನು ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ 35 ಕೊಳವೆ ಬಾವಿಗಳನ್ನು ಪಡೆದುಕೊಳ್ಳಲಾಗಿದೆ.ಬೇಸಿಗೆ ಆರಂಭದಲ್ಲಿ ಪ್ರತಿ ಬಾರಿ ಗ್ರಾಮಾಂತರ ಪ್ರದೇಶಕ್ಕಿಂತ ನಗರ ಪ್ರದೇಶದಲ್ಲಿಯೇ ಅತೀ ಹೆಚ್ಚು ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿತ್ತು. ಅದರಲ್ಲೂ ಜಿಲ್ಲಾ ಕೇಂದ್ರದಲ್ಲಿ ಕಳೆದ ಬೇಸಿಗೆಯಲ್ಲಿ 20 ದಿನಕೊಮ್ಮೆ ನೀರಿನ ಪೂರೈಕೆ ಮಾಡಲಾಗಿತ್ತು. ಪ್ರತಿ ಬಡಾವಣೆಗಳಿಗೆ ಟ್ಯಾಂಕರ್ ನೀರು ಸರಬರಾಜು ಮಾಡಲಾಗುತ್ತಿತ್ತು.
ಆದರೆ, ಈ ಬಾರಿ ಎಲ್ಲೂ ನೀರಿನ ಸಮಸ್ಯೆ ಕಂಡುಬರುತ್ತಿಲ್ಲ. ದಿನದ 24 ಗಂಟೆ ನೀರು ಪೂರೈಸುವ ನೆಟ್ಕಲ್ ಯೋಜನೆ ಪೂರ್ಣಗೊಂಡಿದೆ. ಹಾಗಾಗಿ ಜಿಲ್ಲಾ ಕೇಂದ್ರದಲ್ಲಿ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಯಾವುದಾದರು ವಾರ್ಡ್‍ಗಳಲ್ಲಿ ನೀರು ಸಮಸ್ಯೆ ಕಂಡು ಬಂದಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಸೂಚನೆ ನೀಡಲಾಗಿದೆ.ಜಿಲ್ಲಾ ಕೇಂದ್ರ ರಾಮನಗರ, ಕನಕಪುರ , ಚನ್ನಪಟ್ಟಣ ಮತ್ತು ಹಾರೋಹಳ್ಳಿ ಪಟ್ಟಣ ವ್ಯಾಪ್ತಿಯಲ್ಲಿ ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ. ಮಾಗಡಿ ನಗರ ಪ್ರದೇಶದಲ್ಲಿ ವಾರಕೊಮ್ಮೆ ನೀರು ಪೂರೈಸುತ್ತಿದ್ದು, ಉಳಿದ ದಿನಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.
ಕೋಟ್ .............ಬೆಂಗಳೂರು ದಕ್ಷಿಣ ಜಿಲ್ಲೆಯ 52 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದ್ದು, ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜತೆಗೆ, ಖಾಸಗಿ ಕೊಳವೆ ಬಾವಿಯಿಂದ ನೀರು ಕೊಡಲಾಗುತ್ತಿದೆ.
- ಎನ್.ಕೆ.ಜ್ಞಾನಮೂರ್ತಿ, ಇಇ, ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಿಪಂ, ಬೆಂ.ದಕ್ಷಿಣ ಜಿಲ್ಲೆ.ಬಾಕ್ಸ್ ...................
ಬೆಂ.ದಕ್ಷಿಣ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಇರುವ ಹಳ್ಳಿಗಳುತಾಲೂಕು ಗ್ರಾಪಂ ಖಾಸಗಿ ಟ್ಯಾಂಕರ್ ಖಾಸಗಿ ಬೋರ್‌ವೆಲ್
ಚನ್ನಪಟ್ಟಣ040005ಹಾರೋಹಳ್ಳಿ030005
ಕನಕಪುರ070211ಮಾಗಡಿ080910
ರಾಮನಗರ060604ಒಟ್ಟು281835
17ಕೆಆರ್ ಎಂಎನ್ 2.ಜೆಪಿಜಿಸಂಗ್ರಹ ಚಿತ್ರ.