ಕುಡಿಯುವ ನೀರಿನ ಸಮಸ್ಯೆ: ಖಾಲಿ ಕೊಡ ಹಿಡಿದು ಪ್ರತಿಭಟನೆ

| Published : Jul 16 2025, 12:45 AM IST

ಸಾರಾಂಶ

ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕೆಟ್ಟು ಹೋಗಿ ನೀರಿನ ಸಮಸ್ಯೆ ಉದ್ಭವವಾಗಿರುವುದರಿಂದ ಖಾಲಿ ಕೊಡ ಹಿಡಿದು ಗ್ರಾಮಸ್ಥರ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ದಾಸನದೊಡ್ಡಿ( ಕುರುಬರ ದೊಡ್ಡಿ) ಗ್ರಾಮದಲ್ಲಿ ನಡೆಯಿತು.

ಹನೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕೆಟ್ಟು ಹೋಗಿ ನೀರಿನ ಸಮಸ್ಯೆ ಉದ್ಭವವಾಗಿರುವುದರಿಂದ ಖಾಲಿ ಕೊಡ ಹಿಡಿದು ಗ್ರಾಮಸ್ಥರ ಪ್ರತಿಭಟನೆ ನಡೆಸಿದ ಘಟನೆ ತಾಲೂಕಿನ ದಾಸನದೊಡ್ಡಿ( ಕುರುಬರ ದೊಡ್ಡಿ) ಗ್ರಾಮದಲ್ಲಿ ನಡೆಯಿತು.

ದಾಸನದೊಡ್ಡಿ( ಕುರುಬರ ದೊಡ್ಡಿ) ಗ್ರಾಮದಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕೆಟ್ಟು ಹೋಗಿ ಕುಡಿಯುವ ನೀರಿನ ಸಮಸ್ಯೆ ಉದ್ಭವವಾಗಿದೆ. ಸಂಬಂಧಪಟ್ಟ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಚೆಸ್ಕಾಂ ಇಲಾಖೆಗೆ ತಿಳಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಈ ಹಿನ್ನೆಲೆ ಕೂಡಲೇ ವಿದ್ಯುತ್ ಟ್ರಾನ್ಸ್‌ ಫಾರ್ಮರ್‌ ದುರಸ್ತಿಪಡಿಸುವಂತೆ ಸ್ಥಳೀಯರು ಒತ್ತಾಯಿಸಿದರು.