ಸಾರಾಂಶ
ಹೀಟ್ ವೇವ್ ಸ್ಪೋಕನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುವ ಸಾದ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಿದೆ.
ಕನ್ನಡಪ್ರಭ ವಾರ್ತೆ ಆಳಂದ
ಪ್ರಸ್ತತ ಹಾಗೂ ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುವ ಹಿನ್ನಲೆಯಲ್ಲಿ ಹೀಟ್ ವೇವ್ (ಶಾಖದ ಹೊಡೆತ) ಹೀಟ್ ವೇವ್ ಸ್ಪೋಕನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬೀರುವ ಸಾದ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಹಿಸಿದೆ ಸಾರ್ವಜನಿಕರು ಸಹ ಇದನ್ನು ಪಾಲಿಸಿ ಸುರಕ್ಷಿತವಾಗಿರೆಬೇಕು ಎಂದು ತಹಸೀಲ್ದಾರ ಪ್ರಕಾಶ ಹೊಸಮನಿ ಅವರು ಜನತೆಗೆ ಸಲಹೆ ನೀಡಿದರು.ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ/ಛತ್ರಿ ಬಳಸಿರಿ ಹಾಗೂ ಸಾದ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಸಿ, ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ,ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳೆಯದು ಎಂದರು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ, ಹಿರಿಯ ನಾಗರಿಕರಿಗೆ ಮಕ್ಕಳಿಗೆ ಹೆಚ್ಚು ನೀರು ಕುಡಿಯುವುದನ್ನು ರೂಢಿಸಿಕೊಳ್ಳಬೇಕು ಎಂದರು.
ಬೆಳಗ್ಗೆ 11ರಿಂದ ಸಂಜೆ 4ರ ವರೆಗೆ ಹೊರಾಂಗಣ ದೈಹಿಕ ಚಟುವಟಿಕೆಗಳನ್ನು ಕಡಿಮೆ ಮಾಡಲು ಪ್ರಯತ್ನಿಸಿ ಸಾಕಷ್ಟು ನೀರು ಕುಡಿಯಿರಿ ಮಜ್ಜಿಗೆ ಮತ್ತು ಗ್ಲೋಕೋಸ್, ಓ.ಆರ್.ಎಸ್.ನಂತಹ ದ್ರವ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿರೆಂದು ಹೇಳಿದ್ದಾರೆ.ಬೇಸಿಗೆ ನೀರಿನ ದಾಹ ತಣ್ಣಿಸಲು ಸಾರ್ವಜನಿಕ ಸ್ಥಳಗಳಲ್ಲಿ ಪುರಸಭೆಯಿಂದ ಕುಡಿಯುವ ನೀರಿನ ವ್ಯವಸ್ಥೆಗೆ ಮುಖ್ಯಾಧಿಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಲೋಕಸಭಾ ಸಹಾಯಕ ಚುನಾವಣಾಧಿಕಾರಿ ಮಹಾಂತೇಶ ಮುಳಗುಂದ, ನಾಡ ತಹಸೀಲ್ದಾರ ಶ್ರೀನಿವಾಸ್ ಕುಲಕರ್ಣಿ, ಗ್ರೇಡ-2 ತಹಸೀಲ್ದಾರ ಬಿ.ಜಿ. ಕುದರಿ, ಚುನಾವಣೆ ಶಿರಸ್ತೆದಾರ ಮಹೇಶ ಸಜ್ಜನ್ ಉಪಸ್ಥಿತರಿದ್ದರು.