ಸಾರಾಂಶ
ಹಿಪ್ಪರಗಿ ಜಲಾಶಯದಿಂದ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳ ಪ್ರತಿ ಮನೆ-ಮನೆಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.
ಕನ್ನಡಪ್ರಭ ವಾರ್ತೆ ಜಮಖಂಡಿ
ಹಿಪ್ಪರಗಿ ಜಲಾಶಯದಿಂದ ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳ ಪ್ರತಿ ಮನೆ-ಮನೆಗೆ ಕುಡಿಯುವ ನೀರು ಪೂರೈಸುವ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಹೇಳಿದರು.ಸಿದ್ಧಾಪುರ ಗ್ರಾಮದ ಪ್ರಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಇಲಾಖೆಯಿಂದ ಏರ್ಪಪಡಿಸಿದ್ದ ಜಿಲ್ಲಾಮಟ್ಟದ ಗಣಿತ ಶಿಕ್ಷಕರ ಕಾರ್ಯಾಗಾರದಲ್ಲಿ ಭಾವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನ ಪ್ರತಿಗ್ರಾಮಗಳಿಗೆ ಕೃಷ್ಣಾ ನದಿ ನೀರು ಪೂರೈಸುವ ಕಾಮಗಾರಿಯನ್ನು 350 ಕೋಟಿ ರು. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ. ಕಾಮಗಾರಿ ಪ್ರಗತಿಯಲ್ಲಿದ್ದು ಇನ್ನೂ ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳ್ಳಲಿದೆ. ಕಾಮಗಾರಿಯ ಪರಿಶೀಲಿಸಿ ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಸೂಚಿಸಲಾಗುವುದು ಎಂದರು.
ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಒಂದು ವಿಷಯದ ಬಗ್ಗೆ ಶಿಕ್ಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ನಡೆಸುವ ಮೂಲಕ 10ನೇ ತರಗತಿ ಫಲಿತಾಂಶ ಸುಧಾರಿಸಲು ಕ್ರಮಕೈಗೊಳ್ಳಲಾಗಿದೆ. ನುರಿತ ತಜ್ಞರಿಂದ ಶಿಬಿರ ನಡೆಸಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೂ ಕಲಿಕೆ ತರಬೇತಿ ನೀಡಲು ಉದ್ದೇಶಿಸಲಾಗಿದೆ. ಇದರಿಂದ 10ನೇ ತರಗತಿ ಫಲಿತಾಂಶ ಸುಧಾರಣೆಯಾಗುತ್ತದೆ ಎಂದರು. ತಾಪಂ ಸಿಇಓ ಸಂಜೀವ ಜುನ್ನೂರ, ಬಿಇಓ ಅಶೋಕ ಬಸಣ್ಣವರ ಇದ್ದರು.