ಕಾರ್ಮಿಕ ಯೋಜನೆಗಳ ಜಾಗೃತಿ ವಾಹನಕ್ಕೆ ಚಾಲನೆ

| Published : Feb 06 2024, 01:34 AM IST

ಸಾರಾಂಶ

ದೊಡ್ಡಬಳ್ಳಾಪುರ: ಕಾರ್ಮಿಕರ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ವಾಹನಕ್ಕೆ ಪ್ರಧಾನ ಜಿಲ್ಲಾ ಕಾನೂನು ಮತ್ತು ಸತ್ರ ನ್ಯಾಯಾಧೀಶ ಮತ್ತು ಬೆಂ.ಗ್ರಾ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಂ.ಎಲ್. ರಘನಾಥ್ ಅವರು ಚಾಲನೆ ನೀಡಿದರು.

ದೊಡ್ಡಬಳ್ಳಾಪುರ: ಕಾರ್ಮಿಕರ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ವಾಹನಕ್ಕೆ ಪ್ರಧಾನ ಜಿಲ್ಲಾ ಕಾನೂನು ಮತ್ತು ಸತ್ರ ನ್ಯಾಯಾಧೀಶ ಮತ್ತು ಬೆಂ.ಗ್ರಾ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಎಂ.ಎಲ್. ರಘನಾಥ್ ಅವರು ಚಾಲನೆ ನೀಡಿದರು.

ಈ ವಾಹನ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ ಸಂಚರಿಸುತ್ತಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ, ಕರ್ನಾಟಕ ರಾಜ್ಯ ದಿನಪತ್ರಿಕೆ ವಿತರಣಾ ಕಾರ್ಮಿಕರ ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ಕುರಿತಾದ ಯೋಜನೆಗಳ ಅರಿವು ಮೂಡಿಸುವ ಮಾಹಿತಿ ಒಳಗೊಂಡಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ, ಜಿಲ್ಲಾ ಕಾರ್ಮಿಕ ಅಧಿಕಾರಿ ಹೆಚ್ ಆರ್ ನಾಗೇಂದ್ರ, ವಕೀಲರ ಸಂಘದ ಪದಾಧಿಕಾರಿಗಳು, ಜಿಲ್ಲೆಯ ಕಾರ್ಮಿಕ ನೀರಿಕ್ಷಕರು, ಬ್ಲಾಸಂ ಹಾಸ್ಪಿಟಲ್‌ನ ಸಿಬ್ಬಂದಿ ವರ್ಗದವರು, ಕಾನೂನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.5ಕೆಡಿಬಿಪಿ3-

ಬೆಂ.ಗ್ರಾ. ಜಿಲ್ಲಾದ್ಯಂತ ಸಂಚರಿಸುವ ಕಾರ್ಮಿಕ ಯೋಜನೆಗಳ ಜಾಗೃತಿ ವಾಹನಕ್ಕೆ ಜಿಲ್ಲಾ ನ್ಯಾಯಾಧೀಶರು ಚಾಲನೆ ನೀಡಿದರು.