ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

| Published : Feb 08 2025, 12:30 AM IST

ಸಾರಾಂಶ

ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿತ್ತು. ಕೂಡಿಗೆಯ ಡಯಟ್‌ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸೋಮವಾರಪೇಟೆ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಮಟ್ಟದ ಕ್ರೀಡಾಕೂಟ ಏರ್ಪಡಿಸಲಾಗಿತ್ತು.

ಎರಡು ದಿನಗಳ ಕಾಲ ನಡೆಯಲಿರುವ ಕ್ರೀಡಾಕೂಟಕ್ಕೆ ಕೂಡಿಗೆಯ ಡಯಟ್ ಮೈದಾನದಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಕೋರಿದರು.

ಜಿಲ್ಲಾ ಕ್ಷಯ ರೋಗ ನಿಯಂತ್ರಣಾ ಅಧಿಕಾರಿ ಸನತ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಆನಂದ್,

ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ಶ್ರೀನಿವಾಸ್, ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಡಾ.ಇಂದೂಧರ್, ಮಡಿಕೇರಿ ತಾಲೂಕು ಆರೋಗ್ಯಾಧಿಕಾರಿ ಡಾ.ಚೇತನ್, ಡಾ.ದರ್ಶನ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಎಚ್.ಕೆ.ಶಾಂತಿ, ಹಿರಿಯ ಆರೋಗ್ಯ ಅಧಿಕಾರಿ ವಿಶ್ವಜ್ಞ ಮತ್ತು ವೈದ್ಯರು ಸಿಬ್ಬಂದಿ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.