ಸಾರಾಂಶ
ಬಿ. ಶೇಖರ್ ಗೋಪಿನಾಥಂ
ಕನ್ನಡಪ್ರಭ ವಾರ್ತೆ ಮೈಸೂರುಮೈಸೂರು ಒಡೆಯುರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರು ಅರಮನೆ ಮುಂಭಾಗದ ವೇದಿಕೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸೋಮವಾರ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾ ಕಾರ್ಯಕ್ರಮವನ್ನು ಆಚರಣೆ ಮಾಡಿದ್ದೇನೆ. ಇದು ನನಗೆ ದೊರೆತ ಪುಣ್ಯ ಎಂದರು.ದಸರಾ ಮಹೋತ್ಸವಕ್ಕೆ 400 ವರ್ಷಗಳ ಇತಿಹಾಸ ಇದೆ, 1610 ರಲ್ಲಿ ವಿಜಯನಗರ ಸಾಮ್ರಾಜ್ಯ ಪ್ರಾರಂಭವಾಯಿತು, ಅದರ ಪತನದ ನಂತರ ಶ್ರೀರಂಗಪಟ್ಟಣದಲ್ಲಿ ಪ್ರಾರಂಭಿಸಿ, ನಂತರ ಮೈಸೂರು ಒಡೆಯರು ಮೈಸೂರಿನಲ್ಲಿ ಪ್ರಾರಂಭಿಸಿದರು. ನಂತರ ಸರ್ಕಾರದಿಂದ ಆಚರಿಸಲಾಗುತ್ತಿದೆ ಎಂದು ಅವರು ಹೇಳಿದರು.
ನಾಡಿಗೆ ಸಾಕಷ್ಟು ಕೊಡುಗೆವಿಧಾನಪರಿಷತ್ತು ಸಭಾಧ್ಯಕ್ಷ ಬಸವರಾಜ ಹೊರಟ್ಟಿ ಮಾತನಾಡಿ, ರಾಜ್ಯದ ಐತಿಹಾಸಿಕ ಶ್ರೀಮಂತ ಪರಂಪರೆ ದಸರಾ, ಕನ್ನಡ ನಾಡಿದ ವಿಶೇಷ ಕಲಾ ಪರಂಪರೆಯನ್ನು ಇಡೀ ಜಗತ್ತಿಗೆ ಪರಿಚಯಿಸುತ್ತದೆ. ಮೈಸೂರು ಮಹಾರಾಜರು ನಾಡಿಗೆ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ ಎಂದರು.
ಅಲ್ಲದೆ, ದಸರಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಯಾಗಿದ್ದಾಗ ಕಬ್ಬಡಿ ಆಟ ಆಡಲು ಭಾಗವಹಿಸಿದ್ದೆ ಎಂಬ ತಮ್ಮ ಹಳೆಯ ನೆನಪನ್ನು ಮಾಡಿಕೊಂಡರು.ಇದೇ ವೇಳೆ ಬಳ್ಳಾರಿ ಜಿಲ್ಲೆಯ ಲಕ್ಮೀಪುರ ಗ್ರಾಮದ ಹಿಂದೂಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ಎಂ. ವೆಂಕಟೇಶ್ ಕುಮಾರ್ ಅವರಿಗೆ ದಸರಾ ಮಹೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೀಡುವ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಂಸದ ಸುನೀಲ್ ಬೋಸ್, ಶಾಸಕರಾದ ತನ್ವೀರ್ ಸೇಠ್, ಎ.ಆರ್. ಕೃಷ್ಣಮೂರ್ತಿ, ಡಿ. ರವಿಶಂಕರ್, ಟಿ.ಎಸ್. ಶ್ರೀವತ್ಸ, ಅನಿಲ್ ಚಿಕ್ಕಮಾದು, ಡಾ.ಡಿ. ತಿಮ್ಮಯ, ಕೆ. ವಿವೇಕಾನಂದ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಕಾಡಾ ಅಧ್ಯಕ್ಷ ಮರಿಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ವಿ. ವೆಂಕಟೇಶ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಎಸ್. ಯುಕೇಶ್ ಕುಮಾರ್ ಮೊದಲಾದವರು ಇದ್ದರು.----
ಬಾಕ್ಸ್...ವಾಸುದೇವಚಾರ್ಯರ ಹೆಸರಲ್ಲೂ ಕಾರ್ಯಕ್ರಮ- ಸಿಎಂ ಭರವಸೆ
ಅಭಿನವ ತ್ಯಾಗರಾಜರು ಎಂದೇ ಪ್ರಖ್ಯಾತಿಯನ್ನು ಗಳಿಸಿರುವ ಮೈಸೂರಿನವರೇ ಆದ ವಿದ್ವಾನ್ ವಾಸುದೇವಚಾರ್ಯ ಅವರ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಟಿ.ಎಸ್. ಶ್ರೀವತ್ಸ ಮಾತನಾಡಿ, ವಾಸುದೇವಚಾರ್ಯರ ಹೆಸರಿನಲ್ಲಿ ಕಾರ್ಯಕ್ರಮ ರೂಪಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು, ವಾಸುದೇವಾಚಾರ್ಯರ ಜನ್ಮದಿನ ಅಥವಾ ಅವರು ನಿಧನವಾದ ದಿನವನ್ನು ಆಯ್ಕೆ ಮಾಡಿ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.