ಸಾರಾಂಶ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ರಥಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ ಮಂಗಳವಾರ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ರಥಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ ಮಂಗಳವಾರ ಚಾಲನೆ ನೀಡಿದರು.ಇಲ್ಲಿನ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಾಡದ ಬಳಿಕ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ರೈತರಿಗೆ ಅನುಕೂಲವಾಗುವಂತ ಕಾಮಗಾರಿ ಕೈಗೆತ್ತಿಕೊಳ್ಳಲು ಹಾಗೂ ಯೋಜನೆಯ ಅರಿವು ಮೂಡಿಸಲಾಗುತ್ತಿದೆ. ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆ ಬೆಳೆಯಲು ಈ ಯೋಜನೆ ಅಡಿಯಲ್ಲಿ ಅವಕಾಶವಿದೆ. ಗ್ರಾಮ ಪಂಚಾಯತಿಗಳಿಂದ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಗ್ರಾಮೀಣ ಭಾಗದ ರೈತರಿಗೆ ಅವಕಾಶವಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು.
2025-26ನೇ ಸಾಲಿನ ಕ್ರಿಯಾಯೋಜನೆ ತಯಾರಿಕೆಗೆ ರೈತರು ಅವಶ್ಯಕ ಕಾಮಗಾರಿಗಳ ಬೇಡಿಕೆ ಸಲ್ಲಿಸಬೇಕು. ಗ್ರಾಮ ಸಭೆಗಳಲ್ಲಿ ಭಾಗವಹಿಸಬೇಕು. ಈ ಉದ್ಯೋಗ ವಾಹಿನಿ ರಥವು ತಾಲೂಕಿನ 52 ಗ್ರಾಮ ಪಂಚಾಯತಿಗಳಲ್ಲಿ ಸಂಚರಿಸುವ ಮೂಲಕ ಯೋಜನೆಯ ಮಾಹಿತಿಯನ್ನು ಜನರಿಗೆ ತಲುಪಿಸುವ ಕಾರ್ಯ ನಡೆಸಲಿದೆ.ನರೇಗಾ ಸಹಾಯಕ ನಿರ್ದೇಶಕ ಲಕ್ಷ್ಮೀನಾರಾಯಣ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ರಾಜು ಢಾಂಗೆ, ಸಿಬ್ಬಂದಿಯಾದ ಐ.ಎನ್. ಪಾಟೀಲ, ಎನ್.ಎಸ್. ಕುಲಕರ್ಣಿ, ಕಿರಣ ಅಂಬೇಕರ, ಸಚೀನ ಮಾಳಗಿ, ರವೀಂದ್ರ ಕಂಕಣವಾಡಿ, ವಿನಾಯಕ ನಾಯಿಕ, ಶಂಕರ ಶಿರಗುಪ್ಪಿ, ಮಹಾಂತೇಶ ಬಾದವನಮಠ, ಪ್ರೀತಿ ಜವಳಿ, ಎಸ್.ಎಸ್. ದುರ್ಗಾಯಿ, ಲಕ್ಷ್ಮೀ ಯಡ್ರಾವಿ, ಆಶಾರಾಣಿ ಪಾಟೀಲ, ಉಮಾ ಎಮ್ಮಿ, ಪ್ರೀತಿ ಪಾಟೀಲ ಸಂಜು ಹುದ್ದಾರ, ಸುನೀತಾ ಹಂಚಿನಮನಿ ಇದ್ದರು.