ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಶ್ಯಾದನಹಳ್ಳಿ ದಣ್ಣಮ ಯುವಕರ ಬಳಗ ದೋಸ್ತಿ ದರ್ಬಾರ್ ಸಹಯೋಗದಲ್ಲಿ ಶನಿವಾರ ನಡೆದ ರಾಜ್ಯ ಮಟ್ಟದ ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಗೆ ಚಾಲನೆ ನೀಡಲಾಯಿತು.ಗ್ರಾಮದ ಹೊರವಲಯದಲ್ಲಿ ನಡೆದ ಸ್ಪರ್ಧೆಗೆ ಶ್ರೀವಿಜಯಕಾಳಿ ಮಠದ ರಾಜೇಶ್ ಗುರೂಜಿ ಚಾಲನೆ ನೀಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಹಲವಾರು ಜೋಡಿ ಎತ್ತಿನಗಾಡಿಗಳು ಭಾಗವಹಿಸಿದ್ದವು.
ಮಾಜಿ ಪ್ರಧಾನಿ ಡಾ.ಮನಮೋಹನ್‌ಸಿಂಗ್ ಅವರು ನಿಧನದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ನಂತರ ಸಂಜೆ 4 ಗಂಟೆಗೆ ಆರಂಭಗೊಂಡ ಸ್ಪರ್ಧೆಯಲ್ಲಿ ಹಳ್ಳಿಕಾರ್ ಥಳಿಗಳ ಜೋಡಿ ಎತ್ತುಗಳು ಭಾಗವಹಿಸಿ ಗೆಲುವಿಗಾಗಿ ಸಣೆಸಾಟ ನಡೆಸಿದವು. ಸ್ಪರ್ಧೆಗೆ ಭಾಗವಹಿಸಲು ಶನಿವಾರ ಸಂಜೆಯವೆರೆಗೂ ಎತ್ತುಗಳು ಮಾಲೀಕರು ನೋಂದಣಿ ಮಾಡಿಕೊಳ್ಳುತ್ತಿದ್ದರು.ರಾಜೇಶ್ ಗೂರುಜಿ ಮಾತನಾಡಿ, ಜೋಡಿ ಎತ್ತಿನಗಾಡಿ ಓಟದ ಸ್ಪರ್ಧೆಯೂ ಗ್ರಾಮೀಣ ಕ್ರೀಟಕೂಟವಾಗಿದೆ. ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಪ್ರಸಿದ್ಧಿ ಹೊಂದಿದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಕ್ರೀಡಾಸ್ಪೂರ್ತಿಯೊಂದಿಗೆ ಭಾಗವಹಿಸಬೇಕು ಎಂದು ತಿಳಿಸಿದರು.
ಸ್ಪರ್ಧೆಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಶಾಸಕ ದರ್ಶನ್ ಪುಟ್ಟಣ್ಣಯ್ಯ ಭಾಗವಹಿಸಿದ್ದರು.ಅಮಿತ್ ಶಾ, ಪಿ.ಎಂ.ನರೇಂದ್ರಸ್ವಾಮಿ ರಾಜೀನಾಮೆಗಾಗಿ ಡಿ.30 ರಂದು ಪ್ರತಿಭಟನೆ - ಸಿ.ಎಂ.ಕೃಷ್ಣ
ಮಂಡ್ಯ:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಅಂಬೇಡ್ಕರ್ ಸಿದ್ಧಾಂತ ಪಾಲಿಸದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಡಿ.30ರಂದು ನಗರದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ನೈಜ ಪರಿಶಿಷ್ಟ (ಹೊಲೆಯಮಾದಿಗ) ಸಮುದಾಯಗಳ ಸಾಂವಿಧಾನಿಕ ಹಕ್ಕು ಅವಕಾಶಗಳ ಸಂರಕ್ಷಣೆ ವೇದಿಕೆ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಅಧಿವೇಶನದಲ್ಲಿ ಅಂಬೇಡ್ಕರ್ ಹೆಸರು ಫ್ಯಾಷನ್ ಆಗಿಬಿಟ್ಟಿದೆ ಎಂದು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ಕ್ಷಮೆಯಾಚಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.ರಾಷ್ಟ್ರ ಪಕ್ಷದ ಪ್ರತಿನಿಧಿ ಹಾಗೂ ಕೇಂದ್ರದ ಗೃಹ ಮಂತ್ರಿಯಾಗಿ ಭಾರತ ಸಂವಿಧಾನದ ಕತೃವಿಗೆ ಅಪಮಾನ ಮಾಡಿರುವುದು ದೇಶದ್ರೋಹವಾಗಿದೆ. ಕೂಡಲೇ ದೇಶದ್ರೋಹ ಅಪರಾಧದಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಗಾಗಿ ದೂರು ದಾಖಲಿಸಲಾಗುವುದು ಎಂದು ಹೇಳಿದರು.
ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ದೇಶದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಿದ್ಧಾಂತವಿದ್ದರೂ ರಾಜ್ಯದಲ್ಲಿ ತಾವು ಮುಖ್ಯಮಂತ್ರಿ ಸಿದ್ಧಾಂತವನ್ನು ಪಾಲನೆ ಮಾಡುವುದಾಗಿ ಹೇಳಿಕೆ ನೀಡುವ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ದೂರಿದರು.ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಂತೆಯೇ ಮೀಸಲು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ರಾಜೀನಾಮೆ ನೀಡುವಂತೆ ಆಗ್ರಹಿಸಿ ಡಿ.30ರಂದು ನಗರದ ಜಯಚಾಮರಾಜೇಂದ್ರ ವೃತ್ತದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 1010 ಭಾವಚಿತ್ರದೊಂದಿಗೆ 101 ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಪರ ಘೋಷಣೆ ಕೂಗುವ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ನಿವೃತ್ತ ಶಿಕ್ಷಕ ಡಾ.ಬಿ.ವಿ.ಶ್ರೀನಿವಾಸಮೂರ್ತಿ, ಯುವ ಮುಖಂಡರಾದ ಪೂರ್ಣಚಂದ್ರ, ವೆಂಕಟೇಶ್, ಆನಂದ್, ಅರ್ಪಿತ ಇದ್ದರು.