ಯುವನಿಧಿಗೆ ಚಾಲನೆ, ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆ: ಶಾಸಕ ರಘುಮೂರ್ತಿ

| Published : Jan 12 2024, 01:45 AM IST

ಯುವನಿಧಿಗೆ ಚಾಲನೆ, ವಿದ್ಯಾರ್ಥಿಗಳ ಪ್ರಯಾಣಕ್ಕೆ ಬಸ್ ವ್ಯವಸ್ಥೆ: ಶಾಸಕ ರಘುಮೂರ್ತಿ
Share this Article
  • FB
  • TW
  • Linkdin
  • Email

ಸಾರಾಂಶ

ಲವು ತಿಂಗಳುಗಳಿಂದ ಜಾರಿಯಾಗದೇ ಇದ್ದ ಯುವನಿಧಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆ ಜ.12ರಿಂದ ಜಾರಿಯಾಗಲಿದೆ.

ಚಳ್ಳಕೆರೆ: ರಾಜ್ಯ ಸರ್ಕಾರ ಚುನಾವಣಾ ಸಂದರ್ಭದಲ್ಲಿ ನೀಡಿದ ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸುವಲ್ಲಿ ಯಶಸ್ವಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಜಾರಿಯಾಗದೇ ಇದ್ದ ಯುವನಿಧಿ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಯೋಜನೆ ಜ.12ರಿಂದ ಜಾರಿಯಾಗಲಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು.

ಗುರುವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಯುವನಿಧಿ ಯೋಜನೆ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಯುವನಿಧಿ ಫಲಾನುಭವಿಗಳ ಆಯ್ಕೆ ಕುರಿತು ಸರ್ಕಾರ ಕೆಲವೊಂದು ನಿಯಮ ರೂಪಿಸಿದ್ದು, ಅವುಗಳ ಅನುಷ್ಠಾನಕ್ಕಾಗಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಗಿದೆ. ಶಿವಮೊಗ್ಗ ನಗರದಲ್ಲಿ ಜ.12ರಂದು ರಾಜ್ಯದ ಮುಖ್ಯಮಂತ್ರಿ ಎಸ್.ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದು, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸೇರಿದಂತೆ ಸರ್ಕಾರದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಸಭೆಯಲ್ಲಿ ಉಪಸ್ಥಿತರಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ ಮಾಹಿತಿ ನೀಡಿ, ಜಿಲ್ಲಾ ಯೋಜನಾ ಅನುಷ್ಠಾನಾಧಿಕಾರಿ ವೇಮಣ್ಣ ಮಾಹಿತಿ ನೀಡಿದ್ದು, ಜಿಲ್ಲೆಯಾದ್ಯಂತ 190 ಅರ್ಜಿಗಳು ಸಲ್ಲಿಕೆಯಾಗಿವೆ. ಕಾರ್ಯಕ್ರಮಕ್ಕೆ ಶಿವಮೊಗ್ಗಕ್ಕೆ ತೆರಳಲು ಸರ್ಕಾರದ ವತಿಯಿಂದ 30 ಕೆಎಸ್‌ಆರ್‌ಟಿಸಿ ಬಸ್‌ಗಳು ಸಿದ್ದವಿದ್ದು ತಾಲೂಕು ಕೇಂದ್ರದಿಂದ ಬೆಳಗ್ಗೆ 7 ಗಂಟೆಗೆ ಹೊರಡಲಿವೆ ಎಂದು ತಿಳಿಸಿದರು. ಸಭೆಯಲ್ಲಿ ತಸೀಲ್ದಾರ್ ರೇಹಾನ್ ಪಾಷ, ಸತೀಶ್‌ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.