ಸಾರಾಂಶ
ಗದಗದಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ಸೌಂದರ್ಯ ಸವಿಯಲು ಅಂಬಾರಿ ಬಸ್ ಸೇವೆಗೆ ಜಿಲ್ಲಾ ಉಸ್ತುವಾರ ಸಚಿವ ಎಚ್.ಕೆ. ಪಾಟೀಲ್ ಚಾಲನೆ ನೀಡಿದ್ದಾರೆ.
ಗದಗ: ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಮೈಸೂರು ರಾಜ್ಯಕ್ಕೆ ಕರ್ನಾಟಕ ನಾಮಕರಣಗೊಂಡು ೫೦ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವಳಿ ನಗರದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ಅವಳಿ ನಗರ ಚಿತ್ತಾರ ಹಾಗೂ ದೀಪಾಲಂಕಾರಗಳಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಅವಳಿ ನಗರದ ಸೌಂದರ್ಯ ಸವಿಯಲು ಅಂಬಾರಿ ಬಸ್ ಸೇವೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ವಿಪ ಸದಸ್ಯ ಎಸ್.ವಿ. ಸಂಕನೂರ, ನಗರಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣಾ, ಉಪವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ನಿವೃತ್ತ ಬೆಳಗಾವಿ ಪ್ರಾದೇಶಿಕ ಆಯುಕ್ತ ಎಂ.ಜಿ. ಹಿರೇಮಠ ಸೇರಿದಂತೆ ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.