ಸಾರಾಂಶ
ಗದಗ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆರೋಗ್ಯ ತಪಾಸಣಾ ವಾಹನಕ್ಕೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು. ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದ್ದು ಜಿಲ್ಲೆಯಾದ್ಯಂತ 33500 ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ತಪಾಸಣೆ ಗುರಿಯಿದ್ದು , ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಜಿಲ್ಲೆಯಾದ್ಯಂತ 33500 ಕಾರ್ಮಿಕರು, ಅವಲಂಬಿತರಿಗೆ ತಪಾಸಣೆ ಗುರಿ
ಗದಗ: ಕಾರ್ಮಿಕ ಇಲಾಖೆಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಆರೋಗ್ಯ ತಪಾಸಣಾ ವಾಹನಕ್ಕೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಚಾಲನೆ ನೀಡಿದರು.ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದ್ದು ಜಿಲ್ಲೆಯಾದ್ಯಂತ 33500 ಕಾರ್ಮಿಕರಿಗೆ ಮತ್ತು ಅವರ ಅವಲಂಬಿತರಿಗೆ ತಪಾಸಣೆ ಗುರಿಯಿದ್ದು , ಅರ್ಹರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಕೆ.ಗುರುಪ್ರಸಾದ ಅವರು ಮಾತನಾಡಿ ಎಲ್ಲ ನೊಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರು ಇಲಾಖೆಯ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದರು.ಜಿಲ್ಲಾ ಕಾರ್ಮಿಕರ ಅಧಿಕಾರಿಗಳಾದ ಬಿ.ಆರ್. ಜಾಧವ ಅವರು ಮಾತನಾಡಿ ನೊಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರು ಲೇಬರ್ ಕಾರ್ಡಹೊಂದಿರುವ ಅರ್ಹ ಫಲಾನುಭವಿಗಳಿಗೆ ಪ್ರಿವೆಂಟಿವ್ ಹೆಲ್ತ ಕೇರ್ ಟ್ರೈನಿಂಗ್ ಮತ್ತು ತಪಾಸಣೆ ನಡೆಸಲಾಗುವುದು. ಫಲಾನುಭವಿಗಳು ಲೇಬರ್ ಕಾರ್ಡ , ಆಧಾರ ಕಾರ್ಡ ಹಾಗೂ ರೇಶನ್ ಕಾರ್ಡ ಹಾಜರುಪಡಿಸಿ ತಪಾಸಣೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ಶಿಬಿರದಲ್ಲಿ ಅರ್ಹ ನೊಂದಾಯಿತ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗ ವಿವಿಧ 20 ರೀತಿಯ ಪರೀಕ್ಷೆ ನಡೆಸಲಾಗುವುದು. ತಪಾಸಣೆ ನಂತರ ಕಾರ್ಮಿಕರಿಗೆ ವೈದ್ಯಕೀಯ ವರದಿಗಳನ್ನು ನೀಡಲಾಗುವುದು ಎಂದರು.
ಚಾಲನಾ ಕಾರ್ಯಕ್ರಮದಲ್ಲಿ ಜಿ.ಪಂ. ಯೋಜನಾ ನಿರ್ದೇಶಕ ಎಂ.ವಿ. ಚಳಗೇರಿ, ಕಾರ್ಮಿಕ ನಿರೀಕ್ಷಕ ಉಮೆಶ ಹುಲ್ಲಣ್ಣವರ, ಗೀರೀಶ ಬಂಕದಮನಿ, ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು, ನೊಂದಾಯಿತ ಕಟ್ಟಡ ಕಾರ್ಮಿಕರ ಸಂಘದ ಮುಖಂಡರು, ಬ್ಲಾಸಂ ಆಸ್ಪತ್ರೆಯ ಚಿಕಿತ್ಸಾ ತಂಡದವರು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))