ಸಾರಾಂಶ
ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಚಿನಕುರಳಿ ಗ್ರಾಮದ ಜ್ಞಾನವಿಕಾಶ ಶಾಲೆ ಆವರಣದಲ್ಲಿ ಶಿಕ್ಷಣ ಇಲಾಖೆ ವತಿಯಿಂದ ಪ್ರಾಥಮಿಕ ಶಾಲಾಮಕ್ಕಳ ಚಿನಕುರಳಿ ವೃತ್ತದ ಕ್ರೀಡಾಕೂಟ ನಡೆಯಿತು.ಕ್ರೀಡಾಕೂಟಕ್ಕೆ ಶಿಕ್ಷಕ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್.ಆರ್.ಸುರೇಂದ್ರಕುಮಾರ್ ಚಾಲನೆ ನೀಡಿದರು. ಶಿಕ್ಷಣ ಸಂಯೋಜಕ ರಮೇಶ್ ಕ್ರೀಡಾಜ್ಯೋತಿ ಸ್ವೀಕಾರ ಮಾಡಿದರು. ಪ್ರಾ.ಶಾ.ಶಿಕ್ಷಕ ಸಂಘದ ಅಧ್ಯಕ್ಷ ಮಂಜುನಾಥ್ ಧ್ವಜಾರೋಹಣ ನೆರವೇರಿಸಿದರು. ಕ್ರೀಡಾಕೂಟದಲ್ಲಿ ಚಿನಕುರಳಿ ವೃತ್ತದ ಮಟ್ಟದ16 ಕ್ಕೂ ಅಧಿಕ ಶಾಲೆಗಳಿಂದ ಸುಮಾರು 300ಕ್ಕೂ ಅಧಿಕ ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸೋಲುಗೆಲುವಿಗಾಗಿ ಸೆಣಸಾಟ ನಡೆಸಿದರು.
ಜ್ಞಾನವಿಕಾಶ ಶಾಲೆ ಕಾರ್‍ಯದರ್ಶಿ ಗಜೇಂದ್ರ ಮಾತನಾಡಿ, ಕ್ರೀಡಾಚಟುವಟಿಕೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತಿವೆ. ಆರೋಗ್ಯವಂತರಾಗಿರಬೇಕಾದರೆ ಮಕ್ಕಳು ನಿರಂತರ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಎಂದರು.ಶಾಲಾ ಹಂತದಲ್ಲಿ ನಡೆಯುವ ಕ್ರೀಡಾಕೂಟಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಸೂಕ್ತ ವೇದಿಕೆಯಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಈ ವೇಳೆ ಶಿಕ್ಷಕರಾದ ಮಹದೇವಪ್ಪ, ಅನುಸೂಯ, ತ್ಯಾಗರಾಜು, ಎಂ.ಡಿ.ಕುಮಾರ್, ಕಾಂತರಾಜು, ದೈಹಿಕ ಶಿವಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆಮಂಡ್ಯ: ಜಿಪಂ 2024-25 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಥಮ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು (20 ಅಂಶಗಳ ಕಾರ್ಯಕ್ರಮವು ಸೇರಿದಂತೆ) ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಆ.5 ರಂದು ನಗರದ ಜಿಪಂ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸದರಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಸಿಇಒ ಶೇಕ್ ತನ್ವಿರ್ ಆಸಿಫ್ ತಿಳಿಸಿದ್ದಾರೆ.