ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ತಾಲೂಕಿನ ದೇವೂರ ಗ್ರಾಮದ ಸಮೀಪ ಟಂಟಂ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ.ಕ್ಷೇತ್ರದ ತುಂಬಗಿ ಗ್ರಾಮದ ಶಿವಾನಂದ ಸೋಮರಾಯ ಸಾಲೋಟಗಿ (29) ಮೃತ ಚಾಲಕ. ಗ್ರಾಮದಿಂದ ವಿಜಯಪುರಕ್ಕೆ ಟಂಟಂ ವಾಹನ ಬಾಡಗಿಗೆ ಹೋಗಿ ಬರುವಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಪಿಎಸ್ಐ ಸಚಿನ್ ಆಲಮೇಲಕರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ದೇವರಹಿಪ್ಪರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಡಿಯಾಪೂರ ಸಾಂತ್ವನ:ಜಿಪಂ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಬಸನಗೌಡ ಪಾಟೀಲ ಯಡಿಯಾಪೂರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ನಂತರ ಆಸ್ಪತ್ರೆಯ ವೈದ್ಯರಿಗೆ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ,ಕೈಲಾದ ಸಹಾಯ ಮಾಡಿ ಸರ್ಕಾರದಿಂದ ಪರಿಹಾರ ನೀಡುವಂತೆ ಒತ್ತಾಯಿಸಿದರು.