ವಾಹನ ಚಲಾಯಿಸುವವರು ಕಡ್ಡಾಯ ಲೈಸನ್ಸ್, ವಿಮೆ ಮಾಡಿಸಬೇಕು: ನ್ಯಾ.ವೈದ್ಯ ಶ್ರೀಕಾಂತ್

| Published : Oct 30 2025, 01:45 AM IST

ವಾಹನ ಚಲಾಯಿಸುವವರು ಕಡ್ಡಾಯ ಲೈಸನ್ಸ್, ವಿಮೆ ಮಾಡಿಸಬೇಕು: ನ್ಯಾ.ವೈದ್ಯ ಶ್ರೀಕಾಂತ್
Share this Article
  • FB
  • TW
  • Linkdin
  • Email

ಸಾರಾಂಶ

ತರೀಕೆರೆವಾಹನ ಚಲಾಯಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಡ್ರೈವಿಂಗ್ ಲೈಸನ್ಸ್, ವಾಹನ ವಿಮೆ ಮಾಡಿಸಿ ಹೆಲ್ಮೆಟ್ ಧರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯ ಶ್ರೀಕಾಂತ್ ಹೇಳಿದ್ದಾರೆ.

ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ತರೀಕೆರೆ

ವಾಹನ ಚಲಾಯಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಡ್ರೈವಿಂಗ್ ಲೈಸನ್ಸ್, ವಾಹನ ವಿಮೆ ಮಾಡಿಸಿ ಹೆಲ್ಮೆಟ್ ಧರಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯ ಶ್ರೀಕಾಂತ್ ಹೇಳಿದ್ದಾರೆ.ಕಾನೂನು ನೆರವು ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ತರೀಕೆರೆ ಮಾನಸ ಪದವಿ ಪೂರ್ವ ಕಾಲೇ ಕಾಲೇಜಿನಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕಾನೂನನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. 18 ವರ್ಷ ತುಂಬಿದ ನಂತರ ವಾಹನ ಚಲಾಯಿಸಬೇಕು. ತಪ್ಪಿದಲ್ಲಿ ದಂಡ ಕಟ್ಟಬೇಕಾಗುತ್ತದೆ ಎಂದು ಹೇಳಿದರು.ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ದಿನಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಬಾಲ್ಯವಿವಾಹ ನಿಷೇಧ, ಬಾಲ ಕಾರ್ಮಿಕ ವಿರೋಧ ಕಾಯ್ದೆಗಳ ಬಗ್ಗೆ ಉಪನ್ಯಾಸ ನೀಡಿದರು.ಹಿರಿಯ ವಕೀಲ ಎಂ.ಕೆ.ತೇಜಮೂರ್ತಿ ಮಾತನಾಡಿ ಕಾನೂನನ್ನು ಎಲ್ಲರೂ ತಿಳಿದುಕೊಳ್ಳಬೇಕು. ಕಾಲೇಜಿನಲ್ಲಿ ರ್‍ಯಾಗಿಂಗ್‌ ತಡೆಗಟ್ಟಬೇಕು ಎಂದ ಅವರು ಶಿಕ್ಷಣ ಕಾಯಿದೆ ಬಗ್ಗೆ ವಿವರಿಸಿದರು.ವಕೀಲ ಬಿ.ಪಿ.ವಿಕಾಸ್ ಮಾತನಾಡಿದರು. ಹಿರಿಯ ಉಪನ್ಯಾಸಕ ಚಂದ್ರಮೌಳಿ ಅಧ್ಯಕ್ಷತೆ ವಹಿಸಿದ್ದರು.ಶಿವಮೂರ್ತಿ, ತಿಪ್ಪೇಶಪ್ಪ, ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.-28ಕೆಟಿಆರ್.ಕೆ.10ಃ

ತರೀಕೆರೆ ಮಾನಸ ಪದವಿ ಪೂರ್ವ ಕಾಲೇಜಲ್ಲಿ ನಡೆದ ಕಾನೂನು ಅರಿವು ನೆರವು ಕಾರ್ಯಕ್ರಮ ವನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವೈದ್ಯ ಶ್ರೀಕಾಂತ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ಹಿರಿಯ ವಕೀಲ ಎಸ್.ಸುರೇಶ್ ಚಂದ್ರ ಮತ್ತಿತರರು ಇದ್ದರು.