ಚಿಕ್ಕಮಗಳೂರುಸಾರ್ವಜನಿಕರು ಹಾಗೂ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮನವಿ ಮಾಡಿದರು.
- ಹನುಮಂತಪ್ಪ ವೃತ್ತದಲ್ಲಿ ಪೊಲೀಸ್ ಚೌಕಿ ಉದ್ಘಾಟನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸಾರ್ವಜನಿಕರು ಹಾಗೂ ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಪಾಲಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಮನವಿ ಮಾಡಿದರು.ನಗರದ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ವತಿಯಿಂದ ಸುಮಾರು ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ನೀಡಲಾದ ಪೊಲೀಸ್ ಚೌಕಿಯನ್ನು ಉದ್ಘಾಟಿಸಿ ಮಾತನಾಡಿದರು.ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಕೆ, ಮದ್ಯಪಾನ ಸೇವನೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜೀವ ತುಂಬಾ ಅಮೂಲ್ಯವಾಗಿದ್ದು, ಕುಟುಂಬದವರ ಬಗ್ಗೆ ಕಾಳಜಿ ವಹಿಸಿ ಚಾಲನೆ ಮಾಡುವಾಗ ಪೊಲೀಸ್ ಇಲಾಖೆ ಸಂಚಾರಿ ನಿಯಮ ಗಳನ್ನು ತಪ್ಪದೆ ಪಾಲಿಸಬೇಕೆಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ಯೋಗೀಶ್ ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಾಫಿ ಬೆಳೆಗಾರರು ಮತ್ತು ರೈತರಿಗೆ ಅಗತ್ಯ ಇರುವ ಉತ್ತಮ ಕೃಷಿ ಪರಿಕರ, ರಸಗೊಬ್ಬರ, ಬಿತ್ತನೆ ಬೀಜ, ಕ್ರಿಮಿನಾಶಕಗಳನ್ನು ಸೂಕ್ತ ಸಮಯಕ್ಕೆ ಸರಬರಾಜು ಮಾಡಲಾಗುತ್ತದೆ ಎಂದು ತಿಳಿಸಿದರು.ರೈತರಿಗೆ ಉಪಯುಕ್ತವಾದ ಗುಣಮಟ್ಟದ ಪರಿಕರಗಳನ್ನು ಹಾಗೂ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳನ್ನು ಕಾಲಕ್ಕೆ ತಕ್ಕಂತೆ ಸೂಕ್ತ ಬೆಲೆಗೆ ಪೂರೈಸಲಾಗುತ್ತಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ಎಲ್ಲಾ ಕೃಷಿ ಪರಿಕರ ಸಂಘ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸುತ್ತಿದೆ ಎಂದರು.ಜಿಲ್ಲೆಯಲ್ಲಿ ರೈತಪರ, ಜನಪರ ಕೆಲಸಗಳನ್ನು ಕೃಷಿ ಇಲಾಖೆ ಸಹಯೋಗದೊಂದಿಗೆ ಸಂಘ ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ರೈತರನ್ನು ತಲುಪಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.ವಾಹನ ಚಾಲಕರು ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಇಲ್ಲದೆ ಹೋದರೆ ಅನಾಹುತಕ್ಕೆ ದಾರಿ ಮಾಡಿ ಕೊಡುತ್ತದೆ. ಇದರಿಂದ ಜೀವ ಮಾತ್ರವಲ್ಲ, ಕುಟುಂಬ ಭವಿಷ್ಯ ಕಳೆದುಕೊಳ್ಳಲಿದೆ. ಇದಕ್ಕೆ ಅವಕಾಶ ನೀಡಬಾರದು, ರಸ್ತೆ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಕರೆ ನೀಡಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ವೆಂಕಟೇಶ್ ಚವ್ಹಾಣ್ ಮಾತನಾಡಿ, ಕೇವಲ ಕೃಷಿ ಪರಿಕರ ಮಾರಾಟಗಾರರು ರೈತರ ಪರವಾಗಿರುವ ಜೊತೆಗೆ ಇತರೆ ಸಾರ್ವಜನಿಕರ ಸೇವೆಗೂ ಆಸಕ್ತಿ ವಹಿಸಿದ್ದಾರೆಂಬುದಕ್ಕೆ ಈ ಪೊಲೀಸ್ ಚೌಕಿಯನ್ನು ಕೊಡುಗೆಯಾಗಿ ನೀಡಿದ್ದಾರೆಂದು ಶ್ಲಾಘಿಸಿದರು.ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಉದಯ್ ಪೈ, ಟಿ.ಡಿ. ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಮನು, ಶ್ರೀಕಾಂತ್ ಶೆಟ್ಟಿ, ನಿರ್ದೇಶಕರಾದ ಪ್ರಹಾಲಿ ಮೋಹನ್, ಲವಕುಮಾರ್, ಆನಂದ್, ಶ್ರೀನಿವಾಸ್, ಪರಮೇಶ್ವರಪ್ಪ, ಕೆ.ಪಿ. ಶಿಲ್ಪ ಉಪಸ್ಥಿ ತರಿದ್ದರು.
15 ಕೆಸಿಕೆಎಂ 3ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದಿಂದ ನೀಡಲಾದ ಪೊಲೀಸ್ ಚೌಕಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಉದ್ಘಾಟಿಸಿದರು.