ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಸಚಿವ ಎಂ.ಬಿ.ಪಾಟೀಲ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮಹಿಳೆ ಮತ್ತು ಮಕ್ಕಳ ಸುರಕ್ಷತೆ, ಘನತೆ ಹಾಗೂ ಸಬಲೀಕರಣದ ಉದ್ದೇಶದಿಂದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಸಚಿವ ಎಂ.ಬಿ.ಪಾಟೀಲ ಚಾಲನೆ ನೀಡಿದರು.

ಶಾಸಕರಾದ ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ಸಂಸದ ರಮೇಶ ಜಿಗಜಿಣಗಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಇನ್ಸ್‌ಪೆಕ್ಟರ್ ವಿಠ್ಠಲ ಕೊಕಟನೂರ, ಜಿಲ್ಲಾ ಮಿಷನ್ ಸಂಯೋಜಕಿ ಭಾರತಿ ಹೊನ್ನಳ್ಳಿ ಹಾಗೂ ಅಕ್ಕಪಡೆ ಸಿಬ್ಬಂದಿ ಇದ್ದರು. ಎಸ್ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಜಿಲ್ಲೆಯಲ್ಲಿ ಅಕ್ಕಪಡೆ ಸಿಬ್ಬಂದಿ ಎರಡು ಪಾಳೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ನೀಡುತ್ತದೆ. ಅಕ್ಕಪಡೆಗೆ ಪ್ರತ್ಯೇಕ ವಾಹನದ ಸೌಲಭ್ಯವಿದ್ದು, ಅದರಲ್ಲಿ ಪೊಲೀಸ್ ಇಲಾಖೆ ಓರ್ವ ವಾಹನ ಚಾಲಕರು ಹಾಗೂ ಓರ್ವ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್ ನಿಯೋಜಿತರಾಗಿರುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.