ಸಾರಾಂಶ
ದಾವಣಗೆರೆ: ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪ್ರಾಪ್ತನೊಬ್ಬ ಭಾನುವಾರ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ತಪಾಸಣೆ ನಡೆಸಿದಾಗ ಬೈಕ್ ಸವಾರ ಅಪ್ರಾಪ್ತ ಎಂಬುದು ತಿಳಿದುಬಂದಿದೆ.
ದಾವಣಗೆರೆ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಅಪ್ರಾಪ್ತನೊಬ್ಬ ಭಾನುವಾರ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಬಂದಿದ್ದು, ಸಂಚಾರಿ ಠಾಣೆ ಪೊಲೀಸರು ತಪಾಸಣೆ ನಡೆಸಿದಾಗ ಬೈಕ್ ಸವಾರ ಅಪ್ರಾಪ್ತ ಎಂಬುದು ತಿಳಿದುಬಂದಿದೆ.
ವಾಹನ ಜಪ್ತಿ ಮಾಡಿ ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಬಳಿಕ 3ನೇ ಎಎಸ್‌ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬೈಕ್ ಮಾಲೀಕ ಮಹಮ್ಮದ್ ಷಫಿ ವಿರುದ್ಧ ದೋಷಾರೋಪಣೆ ಪತ್ರ ಸಲ್ಲಿಸಲಾಯಿತು. ಅಪ್ರಾಪ್ತನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ಅವಕಾಶ ಕೊಟ್ಟಿದ್ದಕ್ಕೆ ಮಾಲೀಕರಿಗೆ ಕೋರ್ಟ್ ₹25 ಸಾವಿರ ದಂಡ ವಿಧಿಸಿದೆ. ಈ ಸಂದರ್ಭದಲ್ಲಿ ಪಿಎಸ್‌ಐ ಡಿ.ಎಚ್.ನಿರ್ಮಲ, ಶೈಲಜ ಇತರೆ ಅಧಿಕಾರಿ ಸಿಬ್ಬಂದಿ ಇದ್ದರು.- - -
-24ಕೆಡಿವಿಜಿ35:ದಾವಣಗೆರೆಯಲ್ಲಿ ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಚಾಲನೆ ಮಾಡಿದ ಆರೋಪದ ಹಿನ್ನೆಲೆ ಸಂಚಾರಿ ಠಾಣೆ ಪೊಲೀಸರು ವಾಹನ ಜಪ್ತಿ ಮಾಡಿದರು.