ಸಾರಾಂಶ
ಎಮ್ಮೆಮಾಡು ಗ್ರಾಮದ ಉರೂಸ್ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಉರೂಸ್ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನದಾನ ನಡೆಯಲಿದೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಸಮೀಪದ ಎಮ್ಮೆಮಾಡು ಗ್ರಾಮದ ಉರೂಸ್ ಸಮಾರಂಭಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು.ಶುಕ್ರವಾರ ಜುಮಾ ನಮಾಜಿನ ಬಳಿಕ ದಫ್ ಪ್ರದರ್ಶನದೊಂದಿಗೆ ದರ್ಗಾಗೆ ತೆರಳಿದ ಮುಸ್ಲಿಂ ಬಾಂಧವರು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಙಳ್ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಎಮ್ಮೆಮಾಡು ತಾಜುಲ್ ಇಸ್ಲಾಂ ಮುಸ್ಲಿಂ ಜಮಾಯತ್ ಅಧ್ಯಕ್ಷ ಪಿ.ಎ.ಅಬೂಬಕ್ಕರ್ ಸಖಾಫಿ ಅವರು ಧ್ವಜಾರೋಹಣ ನೆರವೇರಿಸಿದರು. ಫೆ.28ರ ವರೆಗೆ ಉರೂಸ್ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಅನ್ನದಾನ, ನಡೆಯಲಿದೆ.ಈ ಸಂದರ್ಭ ಕೊಡಗು ಜಿಲ್ಲಾ ನಾಹಿಬ್ ಖಾಝಿ ಅಬುಲ್ಲ ಫೈಝಿ ಎಡಪಾಲ, ಸಯ್ಯಿದ್ ಇಲ್ಯಾಸ್ ತಂಙಳ್, ಹಝೀಝ್ ತಂಙಳ್, ಮಾಜಿ ವಖ್ಫ್ ಬೋರ್ಡ್ ಜಿಲ್ಲಾಧ್ಯಕ್ಷ ಯಾಕೂಬ್, ಎಮ್ಮೆಮಾಡು ಜಮಾಯತ್ ಮಾಜಿ ಅಧ್ಯಕ್ಷ ಹುಸೈನ್ ಸಖಾಫಿ, ಹಂಸ ಮುಸ್ಲಿಯಾರ್, ಹಸೈನಾರ್ ಹಾಜಿ ಚಂಬರಂಡ ಜಮಾಯತ್ ನ ಪದಾಧಿಕಾರಿಗಳು ಸದಸ್ಯರು ಹಾಗೂ ಮತ್ತಿತರರು
ಹಾಜರಿದ್ದರು.