ಸಾರಾಂಶ
ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸೆಂಟ್ ಜೋಸೆಫ್ ಬಾಲಕಿಯರ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ನಡೆದ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆ ಸಂಭ್ರಮದಿಂದ ನಡೆಯಿತು.ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ದೇವರಾಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶಿಕ್ಷಕರ ಸಹ ಪಠ್ಯ ಚಟುವಟಿಕೆಗಳಿಂದ ಶಿಕ್ಷಕರ ಪ್ರತಿಭೆ ಹೊರಹೊಮ್ಮುವುದಲ್ಲದೇ ಮಕ್ಕಳಲಿರುವ ಪ್ರತಿಭೆಗಳು ಬೆಳಗಲು ಸಹಕಾರಿಯಾಗಿದೆ ಎಂದು ನುಡಿದರು.
ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹದೇವು ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಕರಲ್ಲಿ ಅಂತರ್ಗತವಾಗಿ ಅಡಗಿರುವ ಪ್ರತಿಭೆಯ ಅನಾವರಣಕ್ಕೆ ಸಹ ಪಠ್ಯ ಚಟುವಟಿಕೆಗಳು ಪೂರಕವಾಗಿವೆ.ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಉಮ್ಮಡಹಳ್ಳಿ ನಾಗರಾಜು, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಂಗಲ ಶಿವಣ್ಣ, ಕಾರ್ಯದರ್ಶಿ ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ಎನ್.ನಂದೀಶ್, ಕಾರ್ಯದರ್ಶಿ ಚಂದ್ರಶೇಖರ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಮಹಾಂತ ದೇವರು, ಸುರೇಖಾ, ಮುಖ್ಯ ಶಿಕ್ಷಕರಾದ ಡಾ.ಎಸ್.ಸಿ.ಮಂಗಳ, ಮುಖ್ಯ ಶಿಕ್ಷಕರಾದ ಆರ್.ಎನ್.ದೇವರಾಜು, ಎ.ಬಸವರಾಜು, ಶಿಕ್ಷಣ ಸಂಯೋಜಕ ಬಿ.ಎಲ್.ಮಧುಸೂಧನ, ಸ್ವಾಮಿ, ಭಾಸ್ಕರ್, ನಾಗರಾಜು ಸೇರಿದಂತೆ ಶಿಕ್ಷಕರು ಭಾಗವಹಿಸಿದ್ದರು.
ಬಹುಮಾನ ವಿತರಣೆ:ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ನಡೆದ ತಾಲೂಕು ಮಟ್ಟದ ಸಹಪಠ್ಯ ಚಟುವಟಿಕೆ ಸ್ಪರ್ಧೆಗಳಲ್ಲಿ ವಿಜೇತರಾದ ಶಿಕ್ಷಕರಿಗೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹದೇವು ಬಹುಮಾನ ವಿತರಣೆ ಮಾಡಿದರು.
ಅ.೨೯ ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆಕನ್ನಡಪ್ರಭ ವಾರ್ತೆ ಮಂಡ್ಯಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಆಯುಷ್ ಇಲಾಖೆ, ಆಯುಷ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಧನ್ವಂತರಿ ಜಯಂತಿ ಅಂಗವಾಗಿ ಒಂಬತ್ತನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅ.೨೯ರಂದು ಬೆಳಗ್ಗೆ ೧೧ ಗಂಟೆಗೆ ಮಂಡ್ಯದ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹಾಗೂ ಮಂಡ್ಯ ಸಂಸದ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಸೆಸ್ಕಾಂ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಉಪಸ್ಥಿತಿಯಲ್ಲಿ ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಕೆ.ವಿವೇಕಾನಂದ ಹಾಗೂ ವಿಧಾನಸಭಾ ಕ್ಷೇತ್ರದ ಶಾಸಕರುಗಳಾದ ಪಿ.ಎಂ.ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್.ಟಿ. ಮಂಜು, ಕೆ.ಎಂ. ಉದಯ್ ಮತ್ತು ನಗರಸಭೆ ಅಧ್ಯಕ್ಷ ಎಂ.ವಿ.ಪ್ರಕಾಶ್ (ನಾಗೇಶ್), ಉಪಾಧ್ಯಕ್ಷ ಅರುಣ್‌ಕುಮಾರ್, ಬೆಂಗಳೂರು ಆಯುಷ್ ಇಲಾಖೆ ಆಯುಕ್ತ ಶ್ರೀನಿವಾಸುಲು, ಮಂಡ್ಯ ಶಾಖೆಯ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಅಧ್ಯಕ್ಷ ಡಾ ಕಲಾಧರ್ ಆಗಮಿಸಲಿದ್ದಾರೆ.