ಸಾರಾಂಶ
ಆರ್ಥಿಕ ಕಾರಣಗಳ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಡುಬಿದಿರೆ: ದ.ಕ. ಜಿಲ್ಲೆಯಲ್ಲಿ ವಾಹನ ಚಾಲನಾ ತರಬೇತಿ ನೀಡಲಾರಂಭಿಸಿದ ಮೊದಲ ಮಹಿಳೆ ಎನ್ನುವ ಹಿರಿಮೆಯ ಬೆನ್ನಿ ಡಿಸೋಜಾ (40) ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಡುಬಿದಿರೆಯ ಹುಡ್ಕೋ ಕಾಲನಿಯಲ್ಲಿ ಮಗಳೊಂದಿಗೆ ವಾಸವಾಗಿದ್ದರು. ಮಗಳು ಪ್ರಾಂತ್ಯ ಹೈಸ್ಕೂಲ್ ಎಂಟನೇ ತರಗತಿ ವಿದ್ಯಾರ್ಥಿನಿ. ಗುರುವಾರ ಮಧ್ಯಾಹ್ನದ ಬಳಿಕ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.ಮೂಡುಬಿದಿರೆಯ ಪ್ರಸಿದ್ಧ ಮಂಜುಶ್ರೀ ಡ್ರೈವಿಂಗ್ ಸ್ಕೂಲ್‌ನಲ್ಲಿ ಕಳೆದ 22ವರ್ಷಗಳಿಂದ ತರಬೇತುದಾರರಾಗಿದ್ದ ಬೆನ್ನಿ ಡಿಸೋಜ ಈ ಅವಧಿಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಹಿಳೆಯರಿಗೆ ವಾಹನ ಚಾಲನಾ ತರಬೇತಿ ನೀಡಿದ್ದಾರೆ. ಆರ್ಥಿಕ ಕಾರಣಗಳ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿರಬೇಕೆಂದು ಶಂಕಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.