ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ತಾಲೂಕಿನ ಕರಿಘಟ್ಟ ಬೆಟ್ಟಕ್ಕೆ ಬೆಂಕಿ ಹಚ್ಚುವುದನ್ನು ತಡೆಗಟ್ಟಲು ದ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಲು ಅರಣ್ಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಕ್ಕೆ ಮುಂದಾಗಿವೆ.ತಾಲೂಕಿನ ಕೆ.ಶೆಟ್ಟಹಳ್ಳಿ ಮೀಸಲು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಕರಿಘಟ್ಟ ಬೆಟ್ಟಕ್ಕೆ ಪ್ರತಿ ವರ್ಷ ಕಿಡಿಗೇಡಿಗಳು ಬೆಂಕಿ ಹಚ್ಚುವ ಕಾರ್ಯ ನಡೆಯುತ್ತಿದೆ. ಹಲವು ವರ್ಷಗಳಿಂದ ಅರಣ್ಯ ಹಾಗೂ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಿಲ್ಲ. ಜೊತೆಗೆ ಇತ್ತೀಚೆಗೆ ಲೋಕಾಯಕ್ತ ಅಧಿಕಾರಿಗಳು ಭೇಟಿ ನೀಡಿ ಕರಿಘಟ್ಟ ಬೆಟ್ಟಕ್ಕೆ ಬೆಂಕಿ ಹಚ್ಚಿದ್ದೇ ಆದ್ದಲ್ಲಿ ಅರಣ್ಯ, ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳನ್ನೇ ನೇರ ಹೊಣೆ ಮಾಡಿವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆ ಡ್ರೋಣ್ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.ಕರಿಘಟ್ಟ ಬೆಟ್ಟದಲ್ಲಿ ವೆಂಕಟರಮಣ ಸ್ವಾಮಿ ಜಾತ್ರಾ ಮಹೋತ್ಸವಕ್ಕೂ ಮುಂಚೆ ಮತ್ತು ಮೂಢನಂಬಿಕೆಯಿಂದ ಹರಿಕೆ ಹೊತ್ತವರು ಬೆಂಕಿ ಹಚ್ಚುತ್ತಿದ್ದು, ಇದರಿಂದ ಪ್ರಾಣಿ, ಪಕ್ಷಿ ಸಂಕುಲಗಳು ಸಂಕಷ್ಟಕ್ಕೆ ಸಿಲುತ್ತಿವೆ. ಹೀಗಾಗಿ ಪೊಲೀಸ್ ಇಲಾಖೆ ವೈರ್‌ಲೆಸ್ ವಿಭಾಗದ ಸಿಬ್ಬಂದಿ ಒಂದು ವಾರ ಕಾಲ ಡ್ರೋಣ್ ಮೂಲಕ ಜನರ ಚಲನ ವಲನದ ಬಗ್ಗೆ ನಿಗಾ ವಹಿಸಲಿದ್ದಾರೆ. ಅಲ್ಲದೇ, ಅರಣ್ಯ ಒಳಗೆ ಮತ್ತು ಅಂಚಿನಲ್ಲಿ ಓಡಾಡುವವರ ಮಾಹಿತಿ ಸಂಗ್ರಹಿಸಿ ಅವರ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.
ಶ್ರೀರಂಗಪಟ್ಟಣ ಪೊಲೀಸ್ ಠಾಣೆ ಸಿಪಿಐ ಬಿ.ಜಿ.ಕುಮಾರ್, ಅರಣ್ಯಾಧಿಕಾರಿ ಶೈಲಜಾ ಸೇರಿ ಇತರ ಎರಡು ಇಲಾಖೆ ಸಿಬ್ಬಂದಿ ಉಪಸ್ಥಿ ತರಿದ್ದು ದ್ರೋಣ್ ಕಾರ್ಯಾಚರಣೆಗೆ ಚಾಲನೆ ನಿಡಿದರು.----------------------6ಕೆಎಂಎನ್ ಡಿ22
ಶ್ರೀರಂಗಪಟ್ಟಣ ತಾಲೂಕಿನ ಕರಿಘಟ್ಟ ಬೆಟ್ಟಕ್ಕೆ ಬೆಂಕಿ ಹಚ್ಚುವುದನ್ನು ತಡೆಗಟ್ಟಲು ದ್ರೋಣ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ನಡೆಸಲು ಅರಣ್ಯ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಕ್ಕೆ ಮುಂದಾಗಿರುವುದು.