ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪೀಡಿತವಾಗಿವೆ. ಇದು ಅತೀ ಗಂಭೀರ ಸಂಗತಿ ಆಗಿದ್ದು, ರೈತರ ಭಾರೀ ನಷ್ಟದಲ್ಲಿ ಸಿಲುಕಿದ್ದಾರೆ. ಕೇಂದ್ರ ಸರ್ಕಾರದ ನೆರವು ಕೇಳುವ ಬಗ್ಗೆ ಚರ್ಚಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳ ಭೇಟಿಗಾಗಿ ಸಮಯ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನವದೆಹಲಿ: ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪೀಡಿತವಾಗಿವೆ. ಇದು ಅತೀ ಗಂಭೀರ ಸಂಗತಿ ಆಗಿದ್ದು, ರೈತರ ಭಾರೀ ನಷ್ಟದಲ್ಲಿ ಸಿಲುಕಿದ್ದಾರೆ. ಕೇಂದ್ರ ಸರ್ಕಾರದ ನೆರವು ಕೇಳುವ ಬಗ್ಗೆ ಚರ್ಚಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ಪ್ರಧಾನ ಮಂತ್ರಿಗಳ ಭೇಟಿಗಾಗಿ ಸಮಯ ಕೇಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ಸಂರಕ್ಷಿತ ವಲಯದ ಬಗ್ಗೆ ಕೆ.ಕಸ್ತೂರಿ ರಂಗನ್‌ ನೀಡಿರುವ ವರದಿ ಹಾಗೂ ಬರದ ಬಗ್ಗೆ ಚರ್ಚಿಸಲು ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಗಳನ್ನು ಭೇಟಿ ಆಗಲು ನಿರ್ಧರಿಸಲಾಗಿದೆ. ಇದಕ್ಕಾಗಿ ಪ್ರಧಾನಿಗಳ ಸಮಯ ಕೇಳಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 240 ತಾಲೂಕುಗಳಿದ್ದು 200ಕ್ಕೂ ಹೆಚ್ಚು ತಾಲೂಕುಗಳು ತೀವ್ರ ಬರ ಪರಿಸ್ಥಿತಿ ಎದುರಿಸುತ್ತಿವೆ. ಇದು ತುಂಬಾ ಗಂಭೀರ ಪರಿಸ್ಥಿತಿ ಆಗಿದ್ದು, ರೈತರು ತೀವ್ರ ತೊಂದರೆಗೆ ಒಳಗಾಗಿದ್ದಾರೆ. ಆರಂಭದಲ್ಲಿ 101 ತಾಲೂಕುಗಳನ್ನು ಬರ ಪಟ್ಟಿಗೆ ರಾಜ್ಯ ಸರ್ಕಾರವು ಸೇರಿಸಿದೆ. ಇದರ ಆಧಾರದ ಮೇಲೆ ಕೇಂದ್ರದಿಂದ ರಾಜ್ಯವು ₹3750 ಕೋಟಿ ನಿರೀಕ್ಷಿಸಿದೆ. ಅಲ್ಲದೆ ಬರ ಪಟ್ಟಿ ಏರುತ್ತಲೇ ಇದ್ದು, 200 ತಾಲೂಕುಗಳು ತೀವ್ರ ಬರ ಎದುರಿಸುತ್ತಿವೆ ಎಂದು ತಿಳಿಸಿದರು.

ಕಾವೇರಿ ನೀರು ಕೊರತೆಯಾಗಿದೆ. ತಮಿಳುನಾಡಿನವರಿಗೆ ರಾಜ್ಯಕ್ಕೆ ಭೇಟಿ ನೀಡಿ ಇಲ್ಲಿನ ಪರಿಸ್ಥಿತಿಯನ್ನು ಬಂದು ನೋಡಿ ಎಂದು ಹೇಳಿದ್ದೇವೆ. ಕೇಂದ್ರ ತಂಡಗಳು ಮೇಕೆದಾಟು ಯೋಜನೆ ಬಗ್ಗೆ ಅರ್ಥವಾಗಿದೆ. ಈ ಯೋಜನೆಯಿಂದ ಕೃಷಿ ಬಳಕೆಗೆ ಸಾಧ್ಯವಿಲ್ಲ ಎಂದು ಅರ್ಥವಾಗಿದೆ ಎಂದ ಮುಖ್ಯಮಂತ್ರಿಗಳು, ಮಹದಾಯಿ ವಿಚಾರದಲ್ಲಿ ರಾಜ್ಯ ಎಲ್ಲ ಕೆಲಸ ಮಾಡಿದೆ. ಕರ್ನಾಟಕ ಗೋವಾ ನಡುವೆ ಸಭೆ ನಡೆಸುವುದಾಗಿ ಕೇಂದ್ರ ಅರಣ್ಯ ಸಚಿವರು ಹಿಂದೆ ಭರವಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಮೈಸೂರು ದಸರಾಗೆ ಮೂರು ಸೇನೆಗಳು ಭಾಗಿಯಾಗಬೇಕು ಎಂದು ಮನವಿ ಮಾಡಿದ್ದೇನೆ. ದಸರಾ ಪರೇಡ್‌ನಲ್ಲಿ ಭಾಗಿಯಾಗಲು ಅವಕಾಶ ಕೊಡಬೇಕು ಎಂದು ಕೋರಿದ್ದೇನೆ. ಇದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಒಪ್ಪಿದ್ದಾರೆ, ದಸರಾದಲ್ಲಿ ಸೇನಾ ಪರೇಡ್, ಏರ್ ಶೋ ಕೂಡಾ ನಡೆಯಲಿದೆ ಎಂದು ಹೇಳಿದರು. ಇನ್ನು ದೂರವಾಣಿ ಮೂಲಕ ನಾನು ಗವಿಸಿದ್ಧೇಶ್ವರ ಸ್ವಾಮೀಜಿ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದೇವೆ. ಅವರು ಯಾವುದೇ ಷರತ್ತು ಹಾಕಿಲ್ಲ. ಉದ್ಘಾಟನೆಗೆ ಬರುವುದಾಗಿ ತಿಳಿಸಿದ್ದಾರೆ. ತಪ್ಪು ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.‘ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮವಲಯ ನೀತಿ ಮರುಪರಿಶೀಲಿಸಿ’:ಕರ್ನಾಟಕದ ಕರಾವಳಿ ವಲಯ ನಿರ್ವಹಣಾ ಯೋಜನೆ (ಸಿಝಡ್‌ಎಂಪಿ) ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಅರಿತು, ಅದಕ್ಕೆ ತಕ್ಕಂತೆ ಸೂಕ್ತ ತಿದ್ದುಪಡಿ ಹಾಗೂ ನಿಯಮಗಳನ್ನು ಸಡಿಲಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಅವರಿಗೆ ಶಿವಕುಮಾರ್ ಅವರು ಸೋಮವಾರ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಸಾಂಪ್ರದಾಯಿಕ ಮೀನುಗಾರರ ಜೀವನೋಪಾಯ ಹಾಗೂ ಕರಾವಳಿ ವಸತಿ ಪ್ರದೇಶಗಳ ರಕ್ಷಣೆಗಾಗಿ ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು. ಪ್ರಸ್ತುತ ಅನುಮೋದಿತ ಕರಾವಳಿ ವಲಯ ನಿರ್ವಹಣಾ ಯೋಜನೆಯ ನಕ್ಷೆಯಲ್ಲಿ ಹಲವು ದೋಷಗಳಿವೆ. ಕಂದಾಯ ದಾಖಲೆಗಳು, ನವೀಕೃತ ಉಪಗ್ರಹ ಚಿತ್ರಣಗಳು ಮತ್ತು ನೈಜ ಸ್ಥಳ ಪರಿಶೀಲನೆ ನಡೆಸಿ ಸರ್ವೆ ಸಂಖ್ಯೆ-ವಾರು ತಿದ್ದುಪಡಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ವ್ಯಾಪ್ತಿಗೆ ಕೃಷಿ ಭೂಮಿ, ತೋಟಗಳು ಮತ್ತು ಮಾನವ ವಸತಿ ಪ್ರದೇಶಗಳನ್ನು ಸೇರಿಸಿರುವುದು ಕಳವಳಕಾರಿ. ಈ ಕುರಿತು ಪ್ರಧಾನಿಗೂ ಪತ್ರ ಬರೆಯಲಾಗಿದ್ದು, ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ವೈಜ್ಞಾನಿಕ ಸರ್ವೆ, ಭೌತಿಕ ಪರಿಶೀಲನೆ ನಡೆಸಬೇಕು. ಉನ್ನತ ಮಟ್ಟದ ಸಮಿತಿಯ ಶಿಫಾರಸುಗಳನ್ನು ಆಧರಿಸಿ, ರಾಜ್ಯದೊಂದಿಗೆ ಚರ್ಚಿಸಿದ ನಂತರವೇ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಕೋರಿದ್ದಾರೆ.

ಗೋವಾ ಮಾದರಿ ಸಡಿಲಿಕೆ ಮಾಡಿ:

ಕರಾವಳಿ ಜನರ ಸಾಂಪ್ರದಾಯಿಕ ಮೀನುಗಾರಿಕೆ, ದೋಣಿ ದುರಸ್ತಿ, ಬಲೆ ಹೆಣೆಯುವುದು, ಮೀನು ಸಂಸ್ಕರಣೆ ಮತ್ತು ಸಾಂಪ್ರದಾಯಿಕ ಮನೆಗಳ ದುರಸ್ತಿ/ಪುನರ್ನಿರ್ಮಾಣಕ್ಕೆ ಸಿಆರ್ಝಡ್ ಚೌಕಟ್ಟಿನೊಳಗೆ ಅಗತ್ಯ ಸಡಿಲಿಕೆ ಹಾಗೂ ಮಾನ್ಯತೆ ನೀಡಬೇಕು ಎಂದು ಈ ಭಾಗದ ಮೀನುಗಾರ ಸಮುದಾಯ, ಕರಾವಳಿ ಪ್ರದೇಶದ ನಿವಾಸಿಗಳು, ಸ್ಥಳೀಯ ಆಡಳಿತ ಸಂಸ್ಥೆಗಳು, ಜನ ಪ್ರತಿನಿಧಿಗಳು ಮತ್ತು ಇತರ ಭಾಗೀದಾರರು ವಿನಂತಿಸಿದ್ದಾರೆ. ಪರಿಸರ ಸಂರಕ್ಷಣೆಗೆ ಧಕ್ಕೆಯಾಗದಂತೆ ಗೋವಾ ರಾಜ್ಯಕ್ಕೆ ಸಿಆರ್ಝಡ್ ನಿಯಮಾವಳಿಗಳಲ್ಲಿ ನೀಡಲಾಗಿರುವ ಸಡಿಲಿಕೆಗಳನ್ನು ಕರ್ನಾಟಕಕ್ಕೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.ಪಶ್ಚಿಮ ಘಟ್ಟಗಳ ಇಎಸ್ ಝಡ್ ಮರುಪರಿಶೀಲನೆ:ಮ್ಯಾಂಗ್ರೋವ್‌ಗಳು (ಕಾಂಡ್ಲಾ ವನಗಳು), ಮರಳಿನ ದಿಬ್ಬಗಳು ಹಾಗೂ ಆಮೆಗಳ ಸಂತಾನೋತ್ಪತ್ತಿ ಪ್ರದೇಶಗಳಂತಹ ಸಿಆರ್‌ಝಡ್‌-1 ರಕ್ಷಣೆಯಲ್ಲಿ ಯಾವುದೇ ರಾಜಿಯಲ್ಲ. ಆದರೆ, ವೈಜ್ಞಾನಿಕ ಹಾಗೂ ಸತ್ಯಾಸತ್ಯತೆಯ ಆಧಾರದ ಮೇಲೆ ನಿಯಮಗಳನ್ನು ಜಾರಿಗೊಳಿಸುವುದರಿಂದ ಪರಿಸರ ಸಂರಕ್ಷಣೆ ಮತ್ತು ಸ್ಥಳೀಯರ ಜೀವನೋಪಾಯ ಎರಡನ್ನೂ ಕಾಯ್ದುಕೊಳ್ಳಬಹುದು ಎಂದು ಸ್ಪಷ್ಟಪಡಿಸಿದ್ದಾರೆ.