ಮಾದಕ ದ್ರವ್ಯ ಸೇವನೆ ಆರೋಗ್ಯಕ್ಕೆ ಹಾನಿಕರ

| Published : Aug 21 2024, 12:32 AM IST

ಸಾರಾಂಶ

ವಿದ್ಯಾರ್ಥಿಗಳು ಶಾಲೆ ಹಂತದಿಂದಲೇ ಮಾದಕ ದ್ರವ್ಯ ವಸ್ತುಗಳ ಬಳಕೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಓದಿನ ಕಡೆ ಗಮನ ಹರಿಸಬೇಕು ಎಂದು ಇನ್ಸ್‌ಪೆಕ್ಟರ್ ಶಶಿಕುಮಾರ್ ಅಭಿಮತ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ವಿದ್ಯಾರ್ಥಿಗಳು ಶಾಲೆ ಹಂತದಿಂದಲೇ ಮಾದಕ ದ್ರವ್ಯ ವಸ್ತುಗಳ ಬಳಕೆ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಓದಿನ ಕಡೆ ಗಮನ ಹರಿಸಬೇಕು ಎಂದು ಇನ್ಸಪೆಕ್ಟರ್ ಶಶಿಕುಮಾರ್ ಅಭಿಮತ ವ್ಯಕ್ತಪಡಿಸಿದರು.

ಹನೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಾದಕ ದ್ರವ್ಯ ವಸ್ತುಗಳ ಮತ್ತು ಬಳಕೆ ಪೂರೈಕೆ ವಿರೋಧಿ ಜನ ಜಾಗೃತಿ ಕಾರ್ಯಕ್ರಮವನ್ನು ಕ್ರಿಸ್ತ ರಾಜ ಹಾಗೂ ವಿವೇಕಾನಂದ ಶಾಲೆಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಾಗೃತಿ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಅಪ್ರಾಪ್ತ ವಯಸ್ಸಿನ ಮಕ್ಕಳೇ ಮಾದಕ ದ್ರವ್ಯಗಳ ಸೇವನೆ ಆರೋಗ್ಯಕ್ಕೆ ಹಾನಿಕರ. ವಿದ್ಯಾರ್ಥಿಗಳು ಶಾಲಾ ಹಂತದಿಂದಲೇ ಇಂತಹ ಚಟುವಟಿಕೆಗಳಿಂದ ದೂರವಿದ್ದು ಓದಿನ ಕಡೆ ಗಮನ ಹರಿಸುವ ಮೂಲಕ ಮಕ್ಕಳು ಉತ್ತಮ ಭವಿಷ್ಯ ಲಭಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು. ಗುಟ್ಕಾ ತಂಬಾಕು ಸೇವನೆ ಆರೋಗ್ಯಕ್ಕೆ ಕೆಟ್ಟದಾಗಿದೆ. ಹೀಗಾಗಿ ಮಕ್ಕಳು ಇದರಿಂದ ದೂರ ಇದ್ದು ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಇಂತಹ ವೇದಿಕೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ಇತರರಿಗೂ ತಿಳಿ ಹೇಳುವ ಮೂಲಕ ಮಾದರಿ ಆಗಬೇಕು ಎಂದರು. ಇದೇ ವೇಳೆಯಲ್ಲಿ ಪೊಲೀಸ್ ಸಿಬ್ಬಂದಿ ವರ್ಗ ಮತ್ತು ವಿವೇಕಾನಂದ ಪ್ರೌಢಶಾಲಾ ಹಾಗೂ ಕ್ರಿಸ್ತ ರಾಜ ಪ್ರೌಢಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಾರ್ವಜನಿಕರಿಗೆ ಹೆಲ್ಮೆಟ್ ಜಾಗೃತಿ: ಪಟ್ಟಣ ಪೊಲೀಸ್ ಠಾಣೆ ಮುಂಭಾಗ ಸಾರ್ವಜನಿಕರಿಗೆ ಆಯೋಜನೆ ಮಾಡಲಾಗಿದ್ದು ಕಾರ್ಯಕ್ರಮದಲ್ಲಿ ಸಬ್ಇನ್ಸ್‌ಪೆಕ್ಟರ್ ಮಂಜುನಾಥ್ ಪ್ರಸಾದ್ ಮಾತನಾಡಿ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಿ ಪ್ರಯಾಣಿಸಿ. ಇತ್ತೀಚಿನ ದಿನಗಳಲ್ಲಿ ಅಪಘಾತಗಳು ಸಂಭವಿಸುತ್ತಿವೆ. ದ್ವಿಚಕ್ರ ವಾಹನ ಸವಾರರೇ ಹೆಚ್ಚಾಗಿ ಪ್ರಾಣ ಹಾನಿ ಸಂಭವಿಸಿಕೊಂಡಿರುವ ಉದಾಹರಣೆಗಳೇ ಹೆಚ್ಚಾಗಿವೆ. ಹೀಗಾಗಿ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಿ ಪ್ರಯಾಣಿಸಿ. ಜೊತೆಗೆ ಸೂಕ್ತ ದಾಖಲಾತಿಯನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು ಇತ್ತೀಚಿನ ದಿನಗಳಲ್ಲಿ ಕಠಿಣ ಕಾನೂನು ತಂದಿರುವುದರಿಂದ ದಂಡ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇದೆ ವೇಳೆಯಲ್ಲಿ ಇನ್ಸ್‌ಪೆಕ್ಟರ್ ಶಶಿಕುಮಾರ್ ಮುಖ್ಯ ಪೇದೆಗಳಾದ ಚಂದ್ರು, ಸುರೇಶ್, ರಾಘವೇಂದ್ರ ಇನ್ನಿತರ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.20ಸಿಎಚ್ಎನ್‌11

ಹನೂರು ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯಲ್ಲಿ ಮಾದಕ ಗ್ರಂಥ ವಸ್ತು ಬಳಕೆ ವಿರೋಧಿ ಜನ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಇನ್ಸ್‌ಪೆಕ್ಟರ್ ಶಶಿಕುಮಾರ್ ನಡೆಸಿಕೊಟ್ಟರು.