ಸಾರಾಂಶ
ಯುವ ಶಕ್ತಿ ಇಂತಹ ವ್ಯಸನಗಳಿಗೆ ಬಲಿಯಾಗುತ್ತಿರುವುದರಿಂದ ಕೌಟುಂಬಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ, ಅಪರಾಧಿ ಮನೋಭಾವನೆ ಹೆಚ್ಚುತ್ತಿದೆ. ಅಲ್ಲದೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ
ಗದಗ: ಇಂದು ಯುವಕರು ಹೆಚ್ಚಾಗಿ ಡ್ರಗ್ಸ್‌ನಂತಹ ವ್ಯಸನಕ್ಕೆ ಬಲಿಯಾಗುತ್ತಿದ್ದಾರೆ. ಯುವ ಶಕ್ತಿಯನ್ನು ಕೇಂದ್ರವಾಗಿರಿಸಿಕೊಂಡು ನಡೆಯುತ್ತಿರುವುದು ದುರಂತವೇ ಸರಿ, ಇದು ದೇಶದ ಪ್ರಗತಿಗೆ ಆತಂಕಕಾರಿಯಾದ ಸಂಗತಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ಎಸ್. ನೇಮಗೌಡ ಹೇಳಿದರು.
ನಗರದ ಕೆಎಲ್‌ಎ ಸಂಸ್ಥೆಯ ಜ. ತೋಂಟದಾರ್ಯ ಮಹಾವಿದ್ಯಾಲಯದಲ್ಲಿ ಜಿಲ್ಲಾ ಪೊಲೀಸ್ ಹಾಗೂ ಯೂಥ್ ರೆಡ್ ಕ್ರಾಸ್ ಸಂಯುಕ್ತಾಶ್ರಯದಲ್ಲಿ ನಡೆದ ಮಾದಕ ವಸ್ತುಗಳ ಜಾಗೃತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಯುವ ಶಕ್ತಿ ಇಂತಹ ವ್ಯಸನಗಳಿಗೆ ಬಲಿಯಾಗುತ್ತಿರುವುದರಿಂದ ಕೌಟುಂಬಿಕ ಹಾಗೂ ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತಿದೆ, ಅಪರಾಧಿ ಮನೋಭಾವನೆ ಹೆಚ್ಚುತ್ತಿದೆ. ಅಲ್ಲದೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದರು.
ಈ ವೇಳೆ ಅಧ್ಯಕ್ಷತೆ ವಹಿಸಿದ ಸ್ಥಾನಿಕ ಆಡಳಿತ ಮಂಡಳಿಯ ಅಧ್ಯಕ್ಷ ಎಸ್.ಪಿ.ಸಂಶಿಮಠ ಮಾತನಾಡಿದರು. ಪ್ರಾ. ಪ್ರೊ.ಪಿ.ಜಿ.ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು.ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯ ಈಶಣ್ಣ ಮುನ್ನವಳ್ಳಿ ಸೇರಿದಂತೆ ವಿವಿಧ ಪೊಲೀಸ್ ಅಧಿಕಾರಿಗಳು, ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರೊ.ಬಿ.ಆರ್. ಚನಗುಂಡಿ ನಿರೂಪಿಸಿದರು. ವಿದ್ಯಾರ್ಥಿ ಸಾಧಿಕ್ ಮಕಾಂದಾರ ಪರಿಚಿಯಿಸಿದರು. ಪ್ರೊ. ಪ್ರದೀಪ್ ಸಂಗಪ್ಪಗೊಳ ವಂದಿಸಿದರು.