ಸಾರಾಂಶ
ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳಾಗುವುದಲ್ಲದೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮ ಕುರಿತು ಜಾಗೃತಿ ಜಾಥದಲ್ಲಿ ಭಾಗವಹಿಸಿ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ಜಗಳೂರು
ಮಾದಕ ವ್ಯಸನದಿಂದ ಕೌಟುಂಬಿಕ ನೆಮ್ಮದಿ ಹಾಳಾಗುವುದಲ್ಲದೇ ಮಕ್ಕಳ ಉಜ್ವಲ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಪೊಲೀಸ್ ವೃತ್ತ ನಿರೀಕ್ಷಕ ಶ್ರೀನಿವಾಸ್ ರಾವ್ ಕಳವಳ ವ್ಯಕ್ತಪಡಿಸಿದರು. ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಮಾದಕ ವ್ಯಸನದ ದುಷ್ಪರಿಣಾಮ ಕುರಿತು ಜಾಗೃತಿ ಜಾಥದಲ್ಲಿ ಭಾಗವಹಿಸಿ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು.ಮಾದಕ ವಸ್ತಗಳು ವ್ಯಕ್ತಿಯ ಆರೋಗ್ಯದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತವೆ. ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಕುಟುಂಬದ ಸದಸ್ಯರಿಗೆ ಮಾದಕವಸ್ತು ಮತ್ತು ಮಾದಕ ದ್ರವ್ಯ ಸೇವನೆಯಿಂದ ದೂರವಿರಲು ಮನವರಿಕೆ ಮಾಡಿಕೊಡಬೇಕು'''''''' ಎಂದು ಕಿವಿಮಾತು ಹೇಳಿದರು.ಮಾದಕ ವ್ಯಸನದಿಂದ ಸ್ವಾಸ್ಥ್ಯ ಸಮಾಜ ನಿರ್ಮಾಣ ಅಸಾಧ್ಯ. ವ್ಯಸನಿಯು ಕೌಟುಂಬಿಕವಾಗಿ ಆರ್ಥಿಕ ಸಂಕಷ್ಟ ಬಳಲಿ ಮಾನಸಿಕ ಅಸ್ವಸ್ಥತೆಗೆ ಬಲಿಯಾಗುತ್ತಾನೆ. ಆದ್ದರಿಂದ ಯುವಸಮೂಹ ಜಾಗೃತರಾಗಬೇಕು. ಪ್ರತಿಯೊಬ್ಬರೂ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು.ಜಾಗೃತಿ ಜಾಥಾದಲ್ಲಿ ಪಿಎಸ್ಐಗಳಾದ ಸಾಗರ್, ಮಂಜುನಾಥ್, ಆಶಾ, ಸಿಬ್ಬಂದಿಗಳಾದ ಶಶಿಧರ್, ರಮೇಶ್ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
-----೨೬ ಜೆಜಿಎಲ್ ೦೨:
ಜಗಳೂರು ಪೊಲೀಸ್ ಇಲಾಖೆಯಿಂದ ಪಟ್ಟಣದಲ್ಲಿ ಮಾದಕ ವ್ಯಸನದ ದುಷ್ಪರಿಣಾಮ ಕುರಿತು ಜಾಗೃತಿ ಜಾಥ ನಡೆಸಲಾಯಿತು.