ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವಂತೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮಾದಕ ದ್ರವ್ಯ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸುವಂತೆ ನಮ್ಮ ಕರ್ನಾಟಕ ಸೇನೆ ವತಿಯಿಂದ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧಿಕ ಕೃತ್ಯಗಳಿಗೆ ಮಾದಕ ದೃವ್ಯ ಬಳಕೆಯೂ ಕಾರಣವೆಂದು ಅನುಮಾನವಿದೆ. ಸರಿಯಾದ ಕಾನೂನು ಕ್ರಮಗಳಿಲ್ಲದೇ ಮಾದಕ ದ್ರವ್ಯ ಮಾರಾಟ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಪ್ರತಿಯೊಂದು ಪೊಲೀಸ್ ಠಾಣೆಗಳಲ್ಲಿಯೂ ಮಾದಕ ದ್ರವ್ಯ ಮಾರಾಟ ಜಾಲದ ಬಗ್ಗೆ ವಿಶೇಷ ಕಾರ್ಯಾಚರಣೆ ನಡೆಸಿ ಅದನ್ನು ನಿಯಂತ್ರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.ಈ ಮಾದಕ ದ್ರವ್ಯ ವ್ಯಸನಕ್ಕೆ ವೈದ್ಯಕೀಯದಂತಹ ಉನ್ನತ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದಾರೆ, ಇದರಿಂದ ದೇಶದ ಉಜ್ವಲ ಭವಿಷ್ಯವೇ ನಾಶವಾಗುತ್ತಿದೆ. ಆದ್ದರಿಂದ ಮುಖ್ಯವಾಗಿ ಶಿಕ್ಷಣ ಸಂಸ್ಥೆಗಳ ಪರಿಸರದಲ್ಲಿ ವಿಶೇಷ ಕಾನೂನು ಕ್ರಮಗಳ ಮೂಲಕ ಮಾದಕ ದ್ರವ್ಯ ವ್ಯಸನವನ್ನು ಸಂಪೂರ್ಣ ನಿಯಂತ್ರಿಸಬೇಕು ಎಂದು ನಮ್ಮ ಕರ್ನಾಟಕ ಸೇನೆಯ ಉಡುಪಿ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ನೇತೃತ್ವದಲ್ಲಿ ಎಸ್ಪಿ ಅವರಿಗೆ ಮನವಿ ಮಾಡಲಾಯಿತು.ಈ ಸಂದರ್ಭ ಸಂಘಟನೆಯ ಜಿಲ್ಲಾ ಗೌರವಾಧ್ಯಕ್ಷ ಲಕ್ಷ್ಮೀಶ್ ಶೆಟ್ಟಿ, ಉಪಾಧ್ಯಕ್ಷ ಆನಂದ್ ಶೆಟ್ಟಿ, ಸಲಹೆಗಾರರಾದ ಪ್ರಕಾಶ್ ದೇವಾಡಿಗ ಹಾಗೂ ತೇಜಸ್ ರಾವ್, ಸಂಘಟನಾ ಕಾರ್ಯದರ್ಶಿ ಸುಬ್ಬಣ್ಣ ಕಾಮತ್, ಸಂಘಟನೆಯ ಕಾರ್ಮಿಕರ ಘಟಕದ ಅಧ್ಯಕ್ಷ ಸಿದ್ದಣ್ಣ ಎಸ್. ಪೂಜಾರಿ, ಕಾರ್ಯದರ್ಶಿ ಸರ್ವೋತ್ತಮ, ಜಿಲ್ಲಾ ಸಂಸ್ಕೃತ ಕಾರ್ಯದರ್ಶಿ ಗಣೇಶ್ ಆಚಾರ್ಯ, ಸದಸ್ಯರಾದ ಅನಿಲ್, ಸುಕುಮಾರ್ ಉಪಸ್ಥಿತರಿದ್ದರು