ಮಾದಕ ವಸ್ತುಗಳ ಸೇವನೆ ಕ್ಯಾನ್ಸರ್ ನಂತಹ ಮಾರಕ ರೋಗ ಬಾಧಿಸಲಿದೆ: ಆರ್‌.ದಿನೇಶ್

| Published : Oct 11 2025, 12:02 AM IST

ಮಾದಕ ವಸ್ತುಗಳ ಸೇವನೆ ಕ್ಯಾನ್ಸರ್ ನಂತಹ ಮಾರಕ ರೋಗ ಬಾಧಿಸಲಿದೆ: ಆರ್‌.ದಿನೇಶ್
Share this Article
  • FB
  • TW
  • Linkdin
  • Email

ಸಾರಾಂಶ

ನರಸಿಂಹರಾಜಪುರಮಾದಕವಸ್ತುಗಳ ಸೇವನೆಯಿಂದ ಹಲವು ರೀತಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಚಿಕ್ಕಮಗಳೂರು ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಆರ್.ದಿನೇಶ್ ಎಚ್ಚರಿಕೆ ನೀಡಿದರು.

- ಜೇಸಿ ಸಪ್ತಾಹ ಕಾರ್ಯಕ್ರಮದಲ್ಲಿ ಮಾದಕ ವಸ್ತುಗಳ ಸೇವನೆ ವಿರುದ್ಧ ಜಾಗೃತಿ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಮಾದಕವಸ್ತುಗಳ ಸೇವನೆಯಿಂದ ಹಲವು ರೀತಿಯ ಕ್ಯಾನ್ಸರ್ ಗೆ ಕಾರಣವಾಗುತ್ತದೆ ಎಂದು ಚಿಕ್ಕಮಗಳೂರು ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಆರ್.ದಿನೇಶ್ ಎಚ್ಚರಿಕೆ ನೀಡಿದರು.ಗುರುವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ್ವಾಲಾಮಾಲಿನಿ ಜೇಸಿಸಂಸ್ಥೆ ಜೇಸಿ ಸಪ್ತಾಹದಲ್ಲಿ ಜೇಸಿ ಸಂಸ್ಥೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಆಶ್ರಯದಲ್ಲಿ ನಡೆದ ಮಾದಕ ವಸ್ತುಗಳು ಸೇವನೆ ವಿರುದ್ಧ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು.

ತಂಬಾಕು ಉತ್ಪನ್ನ ಬೆಳೆಯುವುದರಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತ 2ನೇ ಸ್ಥಾನದಲ್ಲಿದೆ. ಭಾರತದಲ್ಲಿ 27.50 ಕೋಟಿಯಷ್ಟು ಜನರು ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ರಾಜ್ಯದಲ್ಲಿ 1.25 ಕೋಟಿ ಜನ ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ದೇಶದಲ್ಲಿ ಪ್ರತಿ ದಿನ 2,500 ವಿದ್ಯಾರ್ಥಿಗಳು ತಂಬಾಕು ಮತ್ತು ಮಾದಕ ವಸ್ತುಗಳ ವ್ಯಸನಿಗಳಾಗುತ್ತಿದ್ದಾರೆ. ಇದರಲ್ಲಿ 13- 16 ವರ್ಷದ ಮಕ್ಕಳು ಹೆಚ್ಚಾಗಿ ತಂಬಾಕು ಉತ್ಪನ್ನ ಗಳಿಗೆ ದಾಸಾಗುತ್ತಿದ್ದಾರೆ. ಪ್ರಪಂಚದಲ್ಲಿ ಪ್ರತಿ ವರ್ಷ 80 ಲಕ್ಷಕ್ಕಿಂತ ಹೆಚ್ಚು ಜನ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಸಾವನ್ನಪ್ಪುತ್ತಿದ್ದಾರೆ. ಪ್ರತಿ ವರ್ಷ 13 ಲಕ್ಷ ಜನ ಮಾದಕ ವಸ್ತುಗಳ ಸೇವನೆಯಿಂದ ಮರಣ ಹೊಂದುತ್ತಿದ್ದಾರೆ. 13-15 ವರ್ಷದೊಳಗಿನ ವಿದ್ಯಾರ್ಥಿಗಳು ಯಾವುದಾದರೂ ಒಂದು ರೀತಿ ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಾರೆ. 1 ಸಿಗರೇಟ್ ನಲ್ಲಿ 7 ಸಾವಿರಕ್ಕೂ ಅಧಿಕ ರಾಸಾಯನಿಕಗಳಿವೆ. ನಿಕೊಟಿನ್ ವ್ಯಸನ ಆಲ್ಕೋಹಾಲ್ ಗಿಂತ ಸಾವಿರಪಟ್ಟು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಸಂಬಂಧಿ, ಶ್ವಾಸಕೋಶಕಾಯಿಲೆಗಳಿಗೆ ಕಾರಣವಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳು ಉತ್ತಮ ಹವ್ಯಾಸ ಬೆಳೆಸಿಕೊಂಡು, ತಂದೆ,ತಾಯಿ, ಗುರುಗಳನ್ನು ಮಾದರಿಯಾಗಿಟ್ಟುಕೊಂಡು ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಧನಂಜಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಯುವ ಸಮೂಹ ಮಾದಕ ವಸ್ತುಗಳ ದಾಸರಾಗುತ್ತಿರುವುದು ವಿಷಾದದ ಸಂಗತಿ. ಮಾದಕ ವಸ್ತುಗಳಿಗೆ ದಾಸರಾದರೆ ಜೀವನವೇ ನಾಶವಾಗುತ್ತದೆ. ಹಾಗಾಗಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆ, ಮಾದಕವಸ್ತುಗಳ ಸೇವನೆಗೆ ದಾಸರಾಗದೆ ಉತ್ತಮ ಹವ್ಯಾಸ ಬೆಳೆಸಿಕೊಂಡು ಓದಿನ ಕಡೆ ಹೆಚ್ಚಿನ ಗಮನ ಹರಿಸಬೇಕೆಂದರು.

ಜೇಸಿ ಸಂಸ್ಥೆಯ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದಡಿ ಪ್ರಾಂಶುಪಾಲ ಡಾ.ಧನಂಜಯ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆಯನ್ನು ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಸಾರ್ಥಕ್ ಗೌಡ ವಹಿಸಿದ್ದರು. ಸಭೆಯಲ್ಲಿ ಕನ್ನಡ ವಿಭಾಗದ ಮುಖ್ಯಸ್ಥೆ ಜಿ.ಸವಿತಾ,ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಸತೀಶ್, ರೇಜರ್ಸ್ ರೋವರ್ಸ್ ಘಟಕದ ಸಂಚಾಲಕ ಚಂದ್ರಪ್ಪ, ಐಕ್ಯೂಎಸಿ ಸಂಚಾಲಕ ಪ್ರಸಾದ್, ಜೇಸಿ ಸಂಸ್ಥೆ ಕಾರ್ಯದರ್ಶಿ ಮಿಥುನ್ ಗೌಡ, ಜೇಸಿ ಸಪ್ತಾಹದ ಪ್ರಧಾನ ನಿರ್ದೇಶಕ ಜೋಯಿ ಬ್ರೋ, ಜೇಸಿ ಸದಸ್ಯರಾದ ಪವನ್ ಕರ್, ಸುಹಾಸ್, ಅಜಯ್, ಉದಯ್ ಗಿಲ್ಲಿ, ತಂಬಾಕು ನಿಯಂತ್ರಣ ಕೋಶದ ರಾಘವೇಂದ್ರ ಇದ್ದರು.