ಮಾದಕ ವಸ್ತುಗಳು ಕೇವಲ ವ್ಯಕ್ತಿ ಮಾತ್ರ ಅಲ್ಲ, ಇಡೀ ಸಮಾಜವನ್ನೇ ಹಾಳು ಮಾಡುತ್ತದೆ. ನಮ್ಮ ಆಸ್ಪತರೆಗಳಲ್ಲಿ ಉತ್ತಮವಾದ ಮಾನಸಿಕ ಅರೋಗ್ಯ ವಿಭಾಗ ಇದೆ. ಚಟದಿಂದ ಮುಕ್ತರಾಗಲು ಬಯಸುವವರು ಈ ವಿಭಾಗವನ್ನು ಸಂಪರ್ಕಿಸಬಹುದು ಎಂದು ಶಾಸಕ ಡಾ. ಮಂತರ್‌ ಗೌಡ ಹೇಳಿದ್ದಾರೆ.

ಮಡಿಕೇರಿ: ಮಾದಕ ವಸ್ತುಗಳು ಕೇವಲ ವ್ಯಕ್ತಿ ಮಾತ್ರ ಅಲ್ಲ, ಇಡೀ ಸಮಾಜವನ್ನೇ ಹಾಳು ಮಾಡುತ್ತದೆ. ನಮ್ಮ ಆಸ್ಪತರೆಗಳಲ್ಲಿ ಉತ್ತಮವಾದ ಮಾನಸಿಕ ಅರೋಗ್ಯ ವಿಭಾಗ ಇದೆ. ಚಟದಿಂದ ಮುಕ್ತರಾಗಲು ಬಯಸುವವರು ಈ ವಿಭಾಗವನ್ನು ಸಂಪರ್ಕಿಸಬಹುದು ಎಂದು ಶಾಸಕ ಡಾ. ಮಂತರ್‌ ಗೌಡ ಹೇಳಿದ್ದಾರೆ.ನಗರದ ಗಾಂಧಿ ಮೈದಾನದಲ್ಲಿ ಶನಿವಾರ ನಡೆದ ‘ನಶಾ ಮುಕ್ತ ಭಾರತ-ಸ್ವಾಸ್ಥ್ಯ ಭಾರತ’ ಹಾಗೂ ಅಂಗಾಂಗ ದಾನ ಅಭಿಯಾನ (ಜೀವ ಸಾರ್ಥಕತೆ ಅಭಿಯಾನ)ಕ್ಕೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಸಿ. ಭಗವಾನ್ ಅವರೊಂದಿಗೆ ಹಸಿರುನಿಶಾನೆ ತೋರಿ ಅವರು ಮಾತನಾಡಿದರು.

ಜಿಲ್ಲಾಡಳಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ, ಕೊಡಗು ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ, ದಿಶಾ ಭೋದ್ ಫೌಂಡೇಶನ್ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿದ್ಯವಿದ್ಯಾಲಯ ಸೇರಿದಂತೆ ಕಾಲೇಜುಗಳ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಜಾಥಾ ನಡೆಯಿತು. ಪದವಿಗಳಿಗಿಂತ ಮೌಲ್ಯ ಮುಖ್ಯ. ಉತ್ತಮ ಮೌಲ್ಯಯುತ ಬದುಕನ್ನು ಎಲ್ಲರೂ ನಡೆಸಬೇಕು. ಮಾದಕ ವಸ್ತುಗಳು ಕೇವಲ ವ್ಯಕ್ತಿಯನ್ನು ಮಾತ್ರ ಅಲ್ಲ ಇಡೀ ಸಮಾಜವನ್ನೇ ಹಾಳು ಮಾಡುತ್ತದೆ. ಚಟ ಬಿಡಿಸಲು ನಮ್ಮ ಆಸ್ಪತ್ರೆಯಲ್ಲಿ ಉತ್ತಮ ಮಾನಸಿಕ ಅರೋಗ್ಯ ವಿಭಾಗ ಇದೆ ಎಂದು ಡಾ. ಮಂತರ್‌ ಗೌಡ ಹೇಳಿದರು.ಮಾದಕ ವಸ್ತುಗಳ ಕುರಿತು ಮಾಹಿತಿ ನೀಡುವವರ ಹೆಸರು ಗೌಪ್ಯವಾಗಿಸಬೇಕು ಎಂದು ಅವರು ಇದೇ ವೇಳೆ ಮನವಿ ಮಾಡಿದರು.ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಬಿ.ಸಿ. ಭಗವಾನ್ ಮಾತನಾಡಿ, ‘ಇನ್ನು ಮುಂದೆ ಮಾದಕ ವಸ್ತು ಮುಕ್ತ ಕ್ಯಾಂಪಸ್ ಎಂದು ಘೋಷಣೆ ಮಾಡಿಕೊಂಡ ಕಾಲೇಜುಗಳಿಗೆ ಮಾತ್ರವೇ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.ಲಕ್ಷಾಂತರ ಮಂದಿ ಅಂಗಾಂಗಗಳಿಗಾಗಿ ಕಾಯುತ್ತಿದ್ದಾರೆ. ಆದರೆ ಅಂಗಾಂಗ ದಾನ ಮಾಡುವವರ ಸಂಖ್ಯೆ ತೀರಾ ಕಡಿಮೆ ಇದೆ. ಅರಿವಿನ ಕೊರತೆಯಿಂದ ಅಮೂಲ್ಯ ಅಂಗಾಂಗಗಳು ಮಣ್ಣು ಪಾಲಾಗುತ್ತಿವೆ. ಹಾಗಾಗಿ, ಈ ಕುರಿತು ಜಾಗೃತಿ ಮೂಡಿಸಲೂ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.‘ಡಿಜಿಟಲ್ ಅಡಿಕ್ಷನ್’ ಎಂಬುದು ಈಗ ಹೊಸ ಬಗೆಯ ಚಟವಾಗಿ ಪರಿಣಮಿಸಿದೆ. ಮಕ್ಕಳು ಮತ್ತು ಮಹಿಳೆಯರು ಹೆಚ್ಚು ಒಳಗಾಗಿದ್ದಾರೆ. ಅನೇಕ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ತಂತ್ರಜ್ಞಾನವನ್ನು ಜ್ಞಾನದ ಗಳಿಗೆಗಾಗಿ ಮಾತ್ರ ಬಳಸಬೇಕು. ಈ ಕುರಿತು ಪೋಷಕರು ತಮ್ಮ ಮಕ್ಕಳ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.

ಅಂಗಾಂಗ ದಾನ ಮತ್ತು ಮಾದಕವಸ್ತು ವಿರುದ್ಧ ಪ್ರತಿಜ್ಞಾ ವಿಧಿಯನ್ನು ಅವರು ವಿದ್ಯಾರ್ಥಿಗಳಿಗೆ ಬೋಧಿಸಿದರು.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ ವೃಷಬ್ ಮಾತನಾಡಿ, ‘ಮಾದಕವಸ್ತು ವ್ಯಸನ ಕುರಿತು ಸಹಾಯವಾಣಿ 1933ನ್ನು ಸಂಪರ್ಕಿಸಬಹುದು ಎಂದರು.

ಜಾಥಾವು ನಗರದ ಗಾಂಧಿ ಮೈದಾನದಿಂದ ಮಂಗೇರಿರ ಮುತ್ತಣ್ಣ ವೃತ್ತ, ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತ, ಅಜ್ಜಮಾಡ ಬಿ. ದೇವಯ್ಯ ವೃತ್ತದ ಮೂಲಕ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ತಲುಪಿತು. ಅಲ್ಲಿ ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುವ ಕಲಾವಿದ ಇ. ರಾಜು ಮತ್ತು ತಂಡದವರಿಂದ ಬೀದಿ ನಾಟಕ ಪ್ರದರ್ಶಿಸಲಾಯಿತು.ನಟಿ ತೇಜಸ್ವಿನಿ ಸೇರಿದಂತೆ ನಗರದ ವಿವಿಧ ಶಾಲಾ, ಕಾಲೇಜುಗಳ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಅಭಿಯಾನದಲ್ಲಿ ಭಾಗವಹಿಸಿದ್ದು, ಜಾಥಾದಲ್ಲಿ ಪಾಲ್ಗೊಂಡಿದ್ದರು.

ನಗರಸಭೆ ಅಧ್ಯಕ್ಷ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಬಿ.ವೈ. ರಾಜೇಶ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ. ಲೋಕೇಶ್, ಡಾ. ಮೋಹನ್ ಅಪ್ಪಾಜಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ನಂಜುಂಡಯ್ಯ, ಡಾ. ವಿಶಾಲ್ ಕುಮಾರ್, ಡಾ. ಸೋಮಶೇಖರ್, ಡಾ. ಧನಂಜಯ್, ಡಾ. ಸುಮುಖ್, ನಟಿ ಎಸ್.ಪಿ. ತೇಜಸ್ವಿನಿ ಶರ್ಮಾ, ದಿಶಾಭೋದ್ ಫೌಂಡೇಷನ್‌ನ ಸಲಹೆಗಾರ ಅಜಯ ಪುರುಷೋತ್ತಮ್ ಶೆಟ್ಟಿ, ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೊದ ಬೆಂಗಳೂರು ವಿಭಾಗದ ಇನ್‌ಸ್ಪೆಕ್ಟರ್ ರಿಷಬ್ ಮಿಶ್ರಾ, ರೋಟರಿ ಮಿಸ್ಟಿ ಹಿಲ್ಸ್, ರೋಟರಿ ಹುಡ್ಸ್, ಲಯನ್ಸ್, ಇನ್ನರ್ ವಿಲ್, ಮಡಿಕೇರಿ ಚೇಂಬರ್ ಆಫ್ ಕಾಮರ್ಸ್, ರೆಡ್ ಕ್ರಾಸ್, ಕೊಡಗು ಪತ್ರಕರ್ತರ ಸಂಘ, ಕೊಡಗು ಹೋಟೆಲ್ ರೆಸಾರ್ಟ್ ಅಸೋಸಿಯೇಷನ್, ನೀಮಾ ಸಂಘ, ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆ ಮತ್ತು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು ಇತರರು ಭಾಗವಹಿಸಿದ್ದರು.