ಕನ್ನಡಪ್ರಭ ವಾರ್ತೆ ಬೆಳಗಾವಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಒಳಗೆ ಮಾದಕ ವಸ್ತುಗಳು ಹಾಗೂ ಮೊಬೈಲ್ ಫೋನ್‌ಗಳನ್ನು ಎಸೆದು ಹೋಗಿರುವ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್ಸ್‌ಪೆಕ್ಟರ್ ಹಾಗೂ ಬೆಳಗಾವಿ ಗ್ರಾಮೀಣ ಠಾಣೆಯ ಸಿಪಿಐ ಹಿಂಡಲಗಾ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಾಧ್ಯಮಗಳಲ್ಲಿ ಘಟನೆಯ ವರದಿ ಪ್ರಸಾರವಾಗುತ್ತಿದ್ದಂತೆ ಪೊಲೀಸರು ಜೈಲಿಗೆ ದೌಡಾಯಿಸಿ ತನಿಖೆ ಆರಂಭಿಸಿದರು.
ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದ ಒಳಗೆ ಮಾದಕ ವಸ್ತುಗಳು ಹಾಗೂ ಮೊಬೈಲ್ ಫೋನ್‌ಗಳನ್ನು ಎಸೆದು ಹೋಗಿರುವ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಸಿಸಿಬಿ ಇನ್ಸ್‌ಪೆಕ್ಟರ್ ಹಾಗೂ ಬೆಳಗಾವಿ ಗ್ರಾಮೀಣ ಠಾಣೆಯ ಸಿಪಿಐ ಹಿಂಡಲಗಾ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಾಧ್ಯಮಗಳಲ್ಲಿ ಘಟನೆಯ ವರದಿ ಪ್ರಸಾರವಾಗುತ್ತಿದ್ದಂತೆ ಪೊಲೀಸರು ಜೈಲಿಗೆ ದೌಡಾಯಿಸಿ ತನಿಖೆ ಆರಂಭಿಸಿದರು. ಜೈಲಿನ ಕಾಂಪೌಂಡ್ ಹೊರಗಿನಿಂದ ಮುಖಕ್ಕೆ ಮಾಸ್ಕ್ ಧರಿಸಿಕೊಂಡ ಕಿಡಗೇಡಿಗಳು ಒಳಗೆ ವಸ್ತುಗಳನ್ನು ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಎಸೆದ ವಸ್ತುಗಳು ಯಾವುವು ಹಾಗೂ ಅವುಗಳನ್ನು ಯಾರು ಸಂಗ್ರಹಿಸಿದ್ದಾರೆ ಎಂಬ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.---------ಬಾಕ್ಸ್....ಮಾಧ್ಯಮ ವರದಿ ಆಧರಿಸಿ ವಿಚಾರಣೆ: ಕಮಿಷನರ್
ಬೆಳಗಾವಿ: ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾಗಿ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಹೇಳಿದರು.ಜೈಲಿನೊಳಗೆ ಮೊಬೈಲ್ ಹಾಗೂ ಡ್ರಗ್ಸ್ ಹಾಕಲಾಗಿದೆ ಎಂಬ ಮಾಹಿತಿ ಮಾಧ್ಯಮಗಳಲ್ಲಿ ಬಂದಿದೆ. ಹೀಗಾಗಿ, ಅದರ ಸತ್ಯಾಸತ್ಯತೆ ಪರಿಶೀಲನೆ ನಡೆಸಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದ ದಿನಾಂಕ ಹಾಗೂ ಸಮಯವನ್ನು ಚೆಕ್ ಮಾಡುತ್ತಿದ್ದೇವೆ. ಯಾವ ಕ್ಯಾಮೆರಾದ ವಿಡಿಯೋ, ಯಾವ ದಿನದ ವಿಡಿಯೋ ಎಂಬುದು ಮೊದಲು ಸ್ಪಷ್ಟವಾಗಬೇಕು. ವಿಡಿಯೋ ಪರಿಶೀಲನೆ ಬಳಿಕ ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.
ಜೈಲಿನ ಭದ್ರತೆಯನ್ನು ಕೆಐಎಸ್‌ಎಫ್ ಸಿಬ್ಬಂದಿ ನೋಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಉದ್ದೇಶದಿಂದ ಗ್ರಾಮೀಣ ಠಾಣೆ ಪೊಲೀಸರು ಹಾಗೂ ಕೆಐಎಸ್‌ಎಫ್ ಸಿಬ್ಬಂದಿಯ ಗಸ್ತು ಹೆಚ್ಚಿಸಲಾಗುವುದು. ಅಲ್ಲದೇ, ನಾವು ಅಗತ್ಯವಿರುವ ಎಲ್ಲಾ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಭೂಷಣ್ ಬೊರಸೆ ತಿಳಿಸಿದರು.