ಹೂಲಗೇರಿ ನಡವಳಿಕೆ ಅಸಮಾಧಾನಕ್ಕೆ ಕಾರಣ: ಭೂಪನಗೌಡ

| Published : Jan 17 2024, 01:47 AM IST

ಸಾರಾಂಶ

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯಲ್ಲಿ ಹಿರಿಯರ ಹಾಗೂ ಪ್ರಮುಖ ಮುಖಂಡರ ಅಭಿಪ್ರಾಯ ಪಡೆಯದೆ ಬಿಜೆಪಿ ಹಾಗೂ ಸಂಘ ಪರಿವಾರದ ತತ್ವ ಸಿದ್ಧಾಂತಗಳಿಗೆ ಗುರುತಿಸಿಕೊಂಡವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಇದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಆರೋಪ.

ಕನ್ನಡಪ್ರಭ ವಾರ್ತೆ ಲಿಂಗಸುಗೂರು

ಕಾಂಗ್ರೆಸ್‌ನಲ್ಲಿ ಮಾಜಿ ಶಾಸಕ ಡಿ.ಎಸ್ ಹೂಲಗೇರಿಯವರ ನಡವಳಿಕೆ ಹಾಗೂ ಏಕಪಕ್ಷೀಯ ನಿರ್ಧಾರಗಳು ಕಾಂಗ್ರೆಸ್‌ನಲ್ಲಿ ಅಸಮಾಧಾನ ಹಾಗೂ ಗುಂಪುಗಾರಿಕೆಗೆ ಕಾರಣ ಎಂದು ಕಾಂಗ್ರೆಸ್ ಹಿರಿಯ ಮುಖಂಡ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪನಗೌಡ ಕರಡಕಲ್ ಆರೋಪಿಸಿದರು.

ಪಟ್ಟಣದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳಲ್ಲಿ ಗುಂಪುಗಾರಿಕೆ ಅಭಿಪ್ರಾಯ ಬೇಧಗಳು ಸಹಜ, ಪಕ್ಷ ಮುನ್ನಡೆಸುವವರು ಮುಖಂಡರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪಕ್ಷ ಸಂಘಟನೆ ಮಾಡಿದರೆ ಚುನಾವಣೆಯಲ್ಲಿ ಯಶಸ್ಸು ಸಾಧ್ಯವಾಗುತ್ತದೆ. ಆದರೆ ಮಾಜಿ ಶಾಸಕ ಡಿ.ಎಸ್ ಹೂಲಗೇರಿಯವರು ಚುನಾವಣೆಯಂತಹ ನಿರ್ಣಾಯಕ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಅಭಿಪ್ರಾಯ ಕಡೆಗಣಿಸಿದರು. ಇದರ ಜೊತೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಯಲ್ಲಿ ಹಿರಿಯರ ಹಾಗೂ ಪ್ರಮುಖ ಮುಖಂಡರ ಅಭಿಪ್ರಾಯ ಪಡೆಯದೆ ಬಿಜೆಪಿ ಹಾಗೂ ಸಂಘ ಪರಿವಾರದ ತತ್ವ ಸಿದ್ಧಾಂತಗಳಿಗೆ ಗುರುತಿಸಿಕೊಂಡವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಇದು ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ನಾವು ಹೂಲಗೇರಿ, ಬಯ್ಯಾಪೂರು ಕಾಂಗ್ರೆಸ್ ಬಣದವರಲ್ಲ, ಬದಲಾಗಿ ಕಾಂಗ್ರೆಸ್ ನಿಷ್ಠೆಯುಳ್ಳ ಕಾರ್ಯಕರ್ತರಾಗಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಪಾಮಯ್ಯ ಮುರಾರಿ, ಗುಂಡಪ್ಪ ನಾಯಕ, ಮಲ್ಲಣ್ಣ ವಾರದ್, ಆದೇಶ ನಾಯಕ, ಅನೀಷ್‌ ಪಾಷಾ, ಏಕ ಅಂಬಣ್ಣ, ಆದಪ್ಪ ರಾಯದುರ್ಗಾ ಸೇರಿದಂತೆ ಇದ್ದರು.