ಸಾರಾಂಶ
ದಲಿತ ಸಂರಕ್ಷಣಾ ಸಮಿತಿ ನೂತನ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ರ ಜಯಂತಿ ಸಮಾರಂಭ ಏ.15ರಂದು ನಗರದ ಶ್ರೀ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಎನ್.ಡಿ.ಮೈಲಾರಪ್ಪ ಹೇಳಿದ್ದಾರೆ.
ದಾವಣಗೆರೆ: ದಲಿತ ಸಂರಕ್ಷಣಾ ಸಮಿತಿ ನೂತನ ಜಿಲ್ಲಾ ಘಟಕ ಉದ್ಘಾಟನೆ ಹಾಗೂ ಸಂವಿಧಾನಶಿಲ್ಪಿ ಡಾ.ಅಂಬೇಡ್ಕರ್‌ರ ಜಯಂತಿ ಸಮಾರಂಭ ಏ.15ರಂದು ನಗರದ ಶ್ರೀ ಜಯದೇವ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಎನ್.ಡಿ.ಮೈಲಾರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10.30 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ಎಸ್. ಬಸವಂತಪ್ಪ ಪುಷ್ಪಾರ್ಚನೆ ಮಾಡುವರು ಎಂದರು.ಸಮಿತಿ ರಾಜ್ಯಾಧ್ಯಕ್ಷ ಜನ್ಮಭೂಮಿ ನಾಗರಾಜ ಸಂಘವನ್ನು ಉದ್ಘಾಟಿಸುವರು. ಕಾರ್ಮಿಕ ಸಚಿವ ಸಂತೋಷ್ ಲಾಡ್, ಮಾಜಿ ಸಚಿವ ಎಚ್.ಆಂಜನೇಯ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಬಸವರಾಜ ವಿ. ಶಿವಗಂಗಾ, ಲತಾ ಮಲ್ಲಿಕಾರ್ಜುನ, ಬಿ.ದೇವೇಂದ್ರಪ್ಪ, ಡಿ.ಜಿ. ಶಾಂತನಗೌಡ, ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಇತರರು ಭಾಗವಹಿಸುವರು ಎಂದು ಹೇಳಿದರು.
ಸರ್ಕಾರದಿಂದ ಸಿಗುವ ಸೌಲಭ್ಯ, ಶೋಷಿತ, ನೊಂದವರಿಗೆ ನ್ಯಾಯ ಒದಗಿಸಬೇಕೆಂಬ ಸದುದ್ದೇಶದಿಂದ ನೂತನ ಸಂಘಟನೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಅಂಬೇಡ್ಕರ್ ತತ್ವದಲ್ಲಿ ಸಾಮಾಜಿಕ ಕಾರ್ಯ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಮಾಹಿತಿ ನೀಡಿದರು.ಸಮಿತಿ ಗೌರವಾಧ್ಯಕ್ಷ ಬಿ.ಎಲ್. ಚಂದ್ರಣ್ಣ, ಬಿ.ಎಲ್. ಪರಶುರಾಮ, ಚನ್ನಮ್ಮ ಆವರಗೆರೆ, ರೇಣುಕಮ್ಮ, ರುದ್ರಮ್ಮ, ಆಶಾ ಇತರರು ಇದ್ದರು.
;Resize=(128,128))
;Resize=(128,128))