ಮಳೆಗೆ ಮನೆ ಮೇಲ್ಚಾವಣಿ ಕುಸಿದು ಹಾನಿ

| Published : May 22 2024, 12:49 AM IST

ಸಾರಾಂಶ

ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಮುಂದುವರೆದಿದ್ದು, ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ಹಾನಿಯಾಗಿದೆ.

ಬನ್ನೂರಲ್ಲಿ ರಾಜನ್ ಎಂಬುವರ ಮನೆ ಕಾಂಪೌಂಡ್ ಕುಸಿತ

ಕನ್ನಡಪ್ರಭ ವಾರ್ತೆ, ಬಾಳೆಹೊನ್ನೂರು: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಮುಂದುವರೆದಿದ್ದು, ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆಯ ಮೇಲ್ಚಾವಣಿ ಕುಸಿದು ಹಾನಿಯಾಗಿದೆ.

ಕರ್ಕೇಶ್ವರ ಗ್ರಾಮದ ಕೈಮರ ನಿವಾಸಿಯಾದ ಗುಲಾಬಿ ತಿಮ್ಮೇಗೌಡ ಎಂಬುವರ ಮನೆ ಮೇಲ್ಚಾವಣಿ ಸೋಮವಾರ ಸಂಜೆ ಸುರಿದ ಮಳೆಗೆ ಕುಸಿದು ಹಾನಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ.

ಬನ್ನೂರು ಗ್ರಾಪಂ ವ್ಯಾಪ್ತಿಯ ಬನ್ನೂರು ಸರ್ವೆ ನಂ.೯೫ರ ರಾಜನ್ ಎಂಬುವರ ಮನೆಯ ಕಾಂಪೌಂಡ್ ಕುಸಿದು ಹಾನಿ ಯಾಗಿದೆ. ಸೋಮವಾರ ರಾತ್ರಿಯಿಡಿ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗಿದೆ. ಹಾನಿಗೊಂಡ ಎರಡೂ ಸ್ಥಳಗಳಿಗೆ ಗ್ರಾಮ ಲೆಕ್ಕಾಧಿಕಾರಿ ನವೀನ್ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳವಾರ ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಧ್ಯಾಹ್ನದ ವೇಳೆಗೆ ಸಾಧಾರಣ ಮಳೆಯಾಗಿದೆ.೨೧ಬಿಹೆಚ್‌ಆರ್ ೨:

ಬಾಳೆಹೊನ್ನೂರು ಸಮೀಪದ ಕರ್ಕೇಶ್ವರ ಕೈಮರದ ಗುಲಾಬಿ ಎಂಬುವರ ಮನೆಯ ಮೇಲ್ಚಾವಣಿ ಮಳೆಗೆ ಕುಸಿದಿರುವುದು.೨೧ಬಿಹೆಚ್‌ಆರ್ ೩:

ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮದ ರಾಜನ್ ಎಂಬುವರ ಮನೆಯ ಕಂಪೌಂಡ್ ಮಳೆಗೆ ಕುಸಿದಿರುವುದು.