ಸಾರಾಂಶ
ಗುಬ್ಬಿ: ತಾಲೂಕಿನ ಸಿಎಸ್ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದುರ್ಗಮ್ಮ ಅವಿರೋಧ ಆಯ್ಕೆಯಾದರು.
ಗುಬ್ಬಿ: ತಾಲೂಕಿನ ಸಿಎಸ್ ಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ದುರ್ಗಮ್ಮ ಅವಿರೋಧ ಆಯ್ಕೆಯಾದರು.ನೂತನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ದುರ್ಗಮ್ಮ ಮಾತನಾಡಿ ಸರ್ವ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದೇನೆ. ಎಲ್ಲ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿಯ ಬೆಳವಣಿಗೆಗೆ ಶ್ರಮಿಸುತ್ತೇನೆ. ಪಂಚಾಯತಿ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ಸ್ವಚ್ಛತೆ ಕಾಪಾಡಿ. ಕುಡಿಯವ ನೀರು, ಚರಂಡಿ ಸ್ವಚ್ಛತೆ, ಗ್ರಾಮ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗ್ರಾಮ ಪಂಚಾಯತಿಯನ್ನು ಅಭಿವೃದ್ಧಿಗೊಳಿಸಲಾಗುವುದು ಎಂದರು. ಚುನಾವಣಾ ಅಧಿಕಾರಿಯಾಗಿ ರಾಜಸ್ವ ಅಧಿಕಾರಿ ಮುತ್ತುರಾಜ್ ಚುನಾವಣೆ ನಡೆಸಿಕೊಟ್ಟರು. ಈ ವೇಳೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಸರ್ವ ಸದಸ್ಯರು, ಮುಖಂಡರು, ಸುತ್ತಮುತ್ತಲಿನ ಗ್ರಾಮಸ್ಥರು ಹಾಜರಿದ್ದರು.