ವೈಟ್‌ ಟಾಪಿಂಗ್‌ ವೇಳೆ ಮರ ಬಿದ್ದು ಕಾರು ಜಖಂ:

| Published : Sep 23 2024, 01:17 AM IST

ಸಾರಾಂಶ

ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ವೇಳೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ಭಾನುವಾರ ಕೆಂಗೇರಿ ಸ್ಯಾಟ್ ಲೈಟ್ ಟೌನ್‌ನಲ್ಲಿ ನಡೆದಿದೆ

ಕನ್ನಡಪ್ರಭ ವಾರ್ತೆ ಬೆಂಗಳೂರು

ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ವೇಳೆ ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿರುವ ಘಟನೆ ಭಾನುವಾರ ಕೆಂಗೇರಿ ಸ್ಯಾಟ್ ಲೈಟ್ ಟೌನ್‌ನಲ್ಲಿ ನಡೆದಿದೆ.

ಬಿಬಿಎಂಪಿಯಿಂದ ನಗರದ ವಿವಿದೆಢೆ ರಸ್ತೆ ವೈಟ್‌ ಟ್ಯಾಪಿಂಗ್‌ ಕಾಮಗಾರಿ ನಡೆಯುತ್ತಿದೆ. ಕೆಂಗೇರಿ ಉಪನಗರದ 6ನೇ ಮುಖ್ಯರಸ್ತೆ ಬಳಿ ನಡೆಯುತ್ತಿರುವ ಕಾಮಗಾರಿಯಿಂದ ಮರದ ಬೇರು ಸಡಿಲಗೊಂಡು ಮರ ರಸ್ತೆ ಪಕ್ಕ ನಿಂತಿದ್ದ ಕಾರಿನ ಮೇಲೆ ಬಿದ್ದಿದೆ. ಕಾರಿನಲ್ಲಿದ್ದವರು ಘಟನೆಯ ಕೆಲ ನಿಮಿಷಗಳ ಹಿಂದೆ ತಮ್ಮ ಮನೆಯ ಒಳಗೆ ಹೋಗಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಮರ ಬಿದ್ದಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಸಂಪೂರ್ಣ ಜಖಂಗೊಂಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಹಿಂಡಲಗಾ ಜೈಲಿಗೆ ವಿಲ್ಸನ್‌ ಗಾರ್ಡನ್‌ ನಾಗ ಶಿಪ್ಟ್‌ಬೆಳಗಾವಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ ಸೇರಿ ಇತರರಿಗೆ ವಿಶೇಷ ಆತಿಥ್ಯ ನೀಡಿದ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ವಿಲ್ಸನ್‌ ಗಾರ್ಡನ್‌ ನಾಗ ಅಲಿಯಾಸ್‌ ನಾಗರಾಜ ಸೇರಿ 20 ವಿಚಾರಣಾಧೀನ ಕೈದಿಗಳನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಭಾನುವಾರ ರಾತ್ರಿ ಸ್ಥಳಾಂತರಿಸಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಆರೋಪಿ ದರ್ಶನ್‌ ಜತೆಗೆ ಕೂತು ಕಾಫಿ ಮಗ್‌ ಹಿಡಿದುಕೊಂಡು ಸಿಗರೆಟ್‌ ಸೇದುತ್ತಿರುವ ಜತೆಗೆ ವಿಶೇಷ ಆತಿಥ್ಯ ನೀಡಿರುವ ಫೋಟೋ ವೈರಲ್‌ ಆಗಿತ್ತು. ವಿಲ್ಸನ್‌ ಗಾರ್ಡನ್‌ ನಾಗನಿಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್‌ ಮತ್ತಿತರರನ್ನು ಬೇರೆ ಬೇರೆ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅದರಂತೆ ಇದೀಗ ದರ್ಶನ್‌ ಆಪ್ತ ಹಾಗೂ ವಿಲ್ಸನ್‌ ಗಾರ್ಡನ್‌ ನಾಗ ಮತ್ತಿತರರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.