ಪ್ರತಿಭಟನೆ ವೇಳೆ ಕಾಂಗ್ರೆಸ್‌, ಬಿಜೆಪಿ ಮುಖಾಮುಖಿ

| Published : Dec 20 2024, 12:48 AM IST

ಸಾರಾಂಶ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ.ಅಂಬೇಡ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದ ಎದುರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಅಂಬೇಡ್ಕರ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರು ಮುಖಾಮುಖಿಯಾದರು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿದರೆ, ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದ ಆವರಣದಿಂದ ಬಿಜೆಪಿ ಕಾರ್ಯಕರ್ತರತ್ತ ತೆರಳುತ್ತಿದ್ದ ವೇಳೆ ಅವರನ್ನು ಬ್ಯಾರಿಕೇಡ್‌ ಹಾಕಿ ತಡೆದರು. ಈ ವೇಳೆ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.