ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುವಿಶ್ವವಿಖ್ಯಾತ ಮೈಸೂರು ದಸರಾ ಸಂಪನ್ನಗೊಂಡಿದೆ. ಲಕ್ಷಾಂತರ ಜನರು ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡಿದ್ದಾರೆ. 11 ದಿನಗಳ ಕಾಲ ನಡೆದ ವೈಭವೋಪೇತ ದಸರಾ ಮಹೋತ್ಸವವನ್ನು ರಾಜ್ಯ ಸರ್ಕಾರ ಅತ್ಯಂತ ಮುತುವರ್ಜಿಯಿಂದ ಪಾರಂಪರಿಕವಾಗಿ ನಡೆಸಿಕೊಟ್ಟಿದೆ ಎಂದು ನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ದಸರಾ ಸಾಂಸ್ಕೃತಿಕ ಉಪ ಸಮಿತಿ ಅಧ್ಯಕ್ಷ ಕೆ.ವಿ. ಮಲ್ಲೇಶ್ ತಿಳಿಸಿದ್ದಾರೆ.ಸರ್ಕಾರದ ಆಶಯಕ್ಕೆ ತಕ್ಕಂತೆ ಅಧಿಕಾರಿ ವರ್ಗ, ಸಿಬ್ಬಂದಿ ವರ್ಗ ಹಗಲಿರುಳು ಜಂಬೂಸವಾರಿಯ ಯಶಸ್ಸಿಗೆ ಶ್ರಮಿಸಿದ್ದಾರೆ. ಸಂಸದರೂ ಆದ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜ್ಯ ಸರ್ಕಾರದೊಂದಿಗೆ ಸಮನ್ವಯತೆ ಸಾಧಿಸಿ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆ ಬರದಂತೆ ರಾಜಪ್ರಭುತ್ವದ ಪರಂಪರೆಯನ್ನು ಮೇಳೈಸಿದ್ದಾರೆ. ಇವರುಗಳ ಜತೆಗೆ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ, ಮಾವುತರು, ಕಾವಾಡಿಗರು ತಮ್ಮ ತಮ್ಮ ಕೆಲಸಗಳನ್ನು ಅಚ್ಚುಕಟ್ಟಾಗಿ ನಿಭಾಸಿರುವುದು ಶ್ಲಾಘನೀಯ ಎಂದು ತಿಲಿಸಿದ್ದಾರೆ.ಇದರ ಜತೆಗೆ ನನ್ನನ್ನು ಅರಮನೆ ಸಾಂಸ್ಕೃತಿಕ ಉಪ ಸಮಿತಿ ಅಧ್ಯಕ್ಷನಾಗಿ ನೇಮಿಸಿ ದಸರಾ ಮಹೋತ್ಸವದ ಭಾಗವಾಗಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಕಾಂಗ್ರೆಸ್ ಪಕ್ಷದ ನನ್ನ ಎಲ್ಲಾ ಬಂಧುಗಳಿಗೆ ಅವರು ಧನ್ಯವಾದ ಅರ್ಪಿಸಿದ್ದಾರೆ.