ದಸರಾ ಕ್ರೀಡಾಕೂಟ: ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ

| Published : Sep 03 2025, 01:00 AM IST

ಸಾರಾಂಶ

ದಸರಾ ಕ್ರೀಡಾಕೂಟವು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮುರಳೀಧರ್ ಎಂ. ತಿಳಿಸಿದರು.

ಕನ್ನಡಪ್ರಭ ವಾರ್ತೆ, ತುಮಕೂರು

ದಸರಾ ಕ್ರೀಡಾಕೂಟವು ಕ್ರೀಡಾ ಪ್ರತಿಭೆಗಳ ಉತ್ತೇಜನಕ್ಕೆ ಉತ್ತಮ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಮುರಳೀಧರ್ ಎಂ. ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಯುವ ಪೀಳಿಗೆಯು ಕ್ರೀಡಾಸಕ್ತಿ ಬೆಳೆಸಿಕೊಂಡಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸಮತೋಲನದಲ್ಲಿರುತ್ತದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಜಂಕ್ ಫುಡ್‌ಗಳಿಂದ ಸಾಧ್ಯವಾದಷ್ಟು ದೂರವಿದ್ದು, ಪೌಷ್ಠಿಕ ಆಹಾರ ಸೇವನೆ ಮಾಡಬೇಕು. ಹಾಗೆಯೇ ಅತಿಯಾದ ಸಾಮಾಜಿಕ ಜಾಲತಾಣದ ಬಳಕೆಯನ್ನು ತಪ್ಪಿಸಿ, ಕ್ರೀಡೆಯತ್ತ ಗಮನಹರಿಸಬೇಕು. ಇದರಿಂದ ಜೀವನದಲ್ಲಿ ಸಾಧಕರಾಗಿ ಹೊರಹೊಮ್ಮಬಹುದು ಎಂದು ಕಿವಿ ಮಾತು ಹೇಳಿದರು.

ಹಿರಿಯ ಅಂತಾರಾಷ್ಟ್ರೀಯ ಕ್ರೀಡಾಪಟು ಆನಂದ್ ಮಾತನಾಡಿ, ವಿದ್ಯಾರ್ಥಿಗಳು ಶ್ರಮ, ಪರಿಶ್ರಮ ಹಾಗೂ ನಿಯಮಿತ ಅಭ್ಯಾಸದ ಮೂಲಕ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಸಾಧಿಸಬಹುದು. ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವುದಲ್ಲದೆ, ತಂಡ ಭಾವನೆ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ. ಹೀಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಸಾಮರ್ಥ್ಯವನ್ನು ನಂಬಿ, ಸಂಕಲ್ಪದಿಂದ ಮುಂದೆ ಸಾಗಬೇಕು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್ ಟಿ.ಆರ್. ಅಥ್ಲೆಟಿಕ್ಸ್ ಅಸೋಸಿಯೇಷನ್‌ನ ​​ಪ್ರಧಾನ ಕಾರ್ಯದರ್ಶಿ ಪ್ರಭಾಕರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.