ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ

| Published : Sep 21 2024, 01:56 AM IST / Updated: Sep 21 2024, 01:21 PM IST

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಮೈಸೂರು : ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನಮ್ಮ ಮೈಸೂರಿನಲ್ಲಿ ಭರದಿಂದ ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.

ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಶುಕ್ರವಾರ ನಡೆದ ದಸರಾ ಸಿದ್ಧತೆ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಬರ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ದಸರಾ ಹಬ್ಬವನ್ನು ಸರಳವಾಗಿ, ಸಾಂಪ್ರದಾಯಿಕ ಆಚರಿಸಲಾಗಿತ್ತು. ಆದರೆ, ಈ ವರ್ಷ ಉತ್ತಮ ಮುಂಗಾರು ಮಳೆ ಆಗಿರುವುದರಿಂದ ಅದ್ಧೂರಿಯಾಗಿ ದಸರಾ ಆಚರಿಸಲಾಗುವುದು ಎಂದರು.

ಈ ಬಾರಿಯ ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಬೇಕಾಗಿರುವುದರಿಂದ ನೇಮಕಗೊಂಡಿರುವ 19 ದಸರಾ ಉಪ ಸಮಿತಿಗಳು ಎಲ್ಲಾ ರೀತಿಯ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ಅಲ್ಲದೆ, ಈ ಬಾರಿ ದಸರಾದಲ್ಲಿ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳು ಹಾಗೂ ಸರ್ಕಾರದ ಅಭಿವೃದ್ಧಿ ಯೋಜನೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಬೇಕು ಎಂದು ಅವರು ಹೇಳಿದರು. 

ಅಚ್ಚುಕಟ್ಟಾಗಿ ದಸರಾ ಆಚರಿಸಬೇಕುಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ಮಾತನಾಡಿ, ಕಳೆದ ಬಾರಿ ಆಗಿರುವ ನ್ಯೂನತೆಗಳನ್ನು ಈ ಬಾರಿ ಸರಿಪಡಿಸಿಕೊಂಡು ಯಾವುದೇ ಅಡಚಣೆ ಹಾಗೂ ತೊಂದರೆ ಉಂಟಾಗದಂತೆ ಅಚ್ಚುಕಟ್ಟಾಗಿ ದಸರಾ ಆಚರಿಸಬೇಕು ಎಂದರು.ದಸರಾ ಸ್ತಬ್ಧಚಿತ್ರ ಮೆರವಣಿಗೆಯಲ್ಲಿ ಕರ್ನಾಟಕ ಸಂಭ್ರಮ:50, ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ಬಿಂಬಿಸುವ ಕಲಾಕೃತಿಗಳನ್ನು ರಚಿಸಬೇಕು ಹಾಗೂ ಕಳೆದ ಬಾರಿ ಪ್ರದರ್ಶನಗೊಂಡಿರುವ ಮರು ಸ್ತಬ್ಧಚಿತ್ರ ಮತ್ತು ಕಲಾ ತಂಡಗಳ ಮೆರವಣಿಗೆಗಳು ಮರು ಪ್ರದರ್ಶನವಾಗಬಾರದು ಎಂದು ಅವರು ಹೇಳಿದರು.

ಸಂಸದ ಸುನಿಲ್ ಬೋಸ್, ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಬಿ. ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯತ್ರಿ, ನಗರ ಪೊಲೀಸ್ ಆಯುಕ್ತೆ ಸಿಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ಡಿಸಿಎಫ್ ಡಾ.ಕೆ.ಎನ್. ಬಸವರಾಜ ಮೊದಲಾದವರು ಇದ್ದರು

ದಸರಾದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಕ್ರಮದ ಬಗ್ಗೆ ಎಚ್ಚರಿಕೆ ವಹಿಸಿ, ದಸರಾ ವೀಕ್ಷಿಸಲು ಬಂದಂತಹ ಸಾರ್ವಜನಿಕರು ಹಾಗೂ ಪ್ರವಾಸಿಗರಿಗೆ ಯಾವುದೇ ರೀತಿಯ ನಿರಾಸೆಯಾಗದಂತೆ ಅದ್ಧೂರಿಯಾಗಿ ಎಲ್ಲಾ ಕಾರ್ಯಕ್ರಮಗಳು ಜರುಗುವಂತೆ ನೋಡಿಕೊಳ್ಳಬೇಕು. ಉಪ ಸಮಿತಿಯಲ್ಲಿನ ಅಧಿಕಾರಿಗಳು ಆಸಕ್ತಿಯಿಂದ ಕೆಲಸ ನಿರ್ವಹಿಸಿ ದಸರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು.

- ಶಿವರಾಜ್ ಎಸ್. ತಂಗಡಗಿ, ಕನ್ನಡ ಮತ್ತು ಸಂಸ್ಕೃತಿ ಸಚಿವರು