22ಕೆಎಂಎನ್ಡಿ-2ಮಂಡ್ಯದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಕಾವೇರಿ ಹೋರಾಟದಲ್ಲಿ ಕಾವೇರಿ ಕುಟುಂಬದ ಪ್ರೊ.ಕೆ.ಸಿ.ಬಸವರಾಜ್ ಪಾಲ್ಗೊಂಡು ಮಾತನಾಡಿದರು. | Kannada Prabha
Image Credit: KP
ಅ 24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದ.ಕ. ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ಕನ್ನಡಪ್ರಭ ವಾರ್ತೆ ಮಡಿಕೇರಿ ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಅ.24ರಂದು ಸಂಜೆ 4 ಗಂಟೆಯಿಂದ ಅ.25ರಂದು ಬೆಳಗ್ಗೆ 10 ಗಂಟೆಯವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅಧೀಕ್ಷಕರು ಕೊಡಗು ಜಿಲ್ಲೆ, ಮಡಿಕೇರಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿ ಆದೇಶ ನೀಡಿ ಜಿಲ್ಲಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ. ಅ 24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದ.ಕ. ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು. ಅ.24ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳನ್ನು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್. ನಗರ, ಹೊಳೆನರಸೀಪುರ ಹಾಸನ ಸಕಲೇಶಪುರ ಮಾರ್ಗವಾಗಿ ಸಂಚರಿಸುವುದು. ಅ.24ರಂದು ಸಂಜೆ 4 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರದೊಳಗೆ ಯಾವುದೇ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಮಡಿಕೇರಿಯಲ್ಲಿ ಪರ್ಯಾಯ ಮಾರ್ಗ, ಪಾರ್ಕಿಂಗ್ ವ್ಯವಸ್ಥೆಯ ವಿವರ: ಮೈಸೂರು ರಸ್ತೆ ಕಡೆಯಿಂದ ಬರುವ ವಾಹನಗಳು ಮತ್ತು ಸೋಮವಾರಪೇಟೆ ಕಡೆಯಿಂದ ಬರುವ ವಾಹನಗಳು ಸಂಪಿಗೆ ಕಟ್ಟೆ ಕಡೆಯಿಂದ ಎ.ವಿ.ಶಾಲೆ, ಮುತ್ತಪ್ಪ ದೇವಸ್ಥಾನ ಮುಂದೆ ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನದಲ್ಲಿ ವಾಹನ ನಿಲುಗಡೆಗೊಳಿಸುವುದು. ಮುಂದುವರೆದು ಎಸ್.ಪಿ ಕಚೇರಿ ಜಂಕ್ಷನ್, ಮುಂದೆ ಐಟಿಐ ಜಂಕ್ಷನ್ ಕಡೆಯಿಂದ ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ವಾಹನಗಳನ್ನು ನಿಲುಗಡೆಗೊಳಿಸುವುದು. ವಿರಾಜಪೇಟೆ, ಮೂರ್ನಾಡು ಮತ್ತು ಮಂಗಳೂರು ಕಡೆಯಿಂದ ಬರುವ ವಾಹನಗಳಿಗೆ ಜಿಟಿ ವೃತ್ತದಿಂದ ಮೈಸೂರು ರಸ್ತೆ ಕಡೆಗೆ ತಿರುಗಿ ಮೈಸೂರು ರಸ್ತೆಯಲ್ಲಿ ಸಾಗಿ ಚೈನ್‌ಗೇಟ್ ಮೂಲಕ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಗಾಳಿಬೀಡು ಅಬ್ಬಿಫಾಲ್ಸ್, ಕಾಲೂರು ಕಡೆಯಿಂದ ಬರುವ ವಾಹನಗಳು ಎಫ್.ಎಂ.ಸಿ ಕಾಲೇಜು ಮೈದಾನದಲ್ಲಿ ನಿಲುಗಡೆಗೊಳಿಸುವುದು. ಮೈಸೂರು, ಸಿದ್ದಾಪುರ, ಮಂಗಳೂರು ಕಡೆಯಿಂದ ಬರುವ ದ್ವಿಚಕ್ರ ವಾಹನಗಳ ನಿಲುಗಡೆಗೆ ಮೈಸೂರು ರಸ್ತೆಯ ಈಸ್ಟ್ ಎಂಡ್ ಹೋಟೆಲ್ ಮುಂಭಾಗದಲ್ಲಿರುವ ಶಾಂತಿ ಚರ್ಚ್ ಮೈದಾನದಲ್ಲಿ ನಿಲುಗಡೆ ಮಾಡುವುದು. ನಗರದಲ್ಲಿರುವ ಗಣಪತಿ ಬೀದಿ, ಮಹದೇವಪೇಟೆ ನಿವಾಸಿಗಳು ತಮ್ಮ ವಾಹನಗಳನ್ನು ಕ್ರಸೆಂಟ್ ಶಾಲೆಯ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಕಾಲೇಜು ರಸ್ತೆ, ಕೊಹಿನೂರು ರಸ್ತೆ ಮತ್ತು ನಗರದ ಮಧ್ಯಭಾಗದಲ್ಲಿರುವ ಸಾರ್ವಜನಿಕರು ತಮ್ಮ ವಾಹನಗಳನ್ನು ರಸ್ತೆಯಲ್ಲಿ ನಿಲ್ಲಿಸದೆ ಹಿಂದುಸ್ಥಾನಿ ಶಾಲೆಯ ಮೈದಾನದಲ್ಲಿ ನಿಲುಗಡೆಗೊಳಿಸುವುದು. ಅ.24 ರಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗ್ಗೆ 10 ಗಂಟೆಯವರೆಗೆ ನಗರದೊಳಗೆ ವಾಹನ ಸಂಚಾರವನ್ನು ನಿರ್ಬಂಧಿಸುವುದು ಮತ್ತು ನಗರದೊಳಗೆ ಇರುವ ಎಲ್ಲ ರಸ್ತೆಗಳನ್ನು ನಿಲುಗಡೆ ರಹಿತ ರಸ್ತೆಗಳೆಂದು ಪ್ರಕಟಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳು ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಡಿಪೋ ಮತ್ತು ಆರ್.ಎಂ.ಸಿಯನ್ನು ಬಸ್ ನಿಲ್ದಾಣವಾಗಿ ಮಾರ್ಪಾಡಿಸಿಕೊಳ್ಳುವುದು ಮತ್ತು ನಗರದೊಳಗೆ ಸಂಚರಿಸದಂತೆ ವ್ಯವಸ್ಥೆ ಮಾಡಿಕೊಳ್ಳುವುದು. ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು. ಖಾಸಗಿ ಬಸ್‌ಗಳು ನಗರದೊಳಗೆ ಆಗಮಿಸದೆ ಜಿ.ಟಿ. ವೃತ್ತದಲ್ಲಿಯೇ ಪ್ರಯಾಣಿಕರನ್ನು ಇಳಿಸಿ, ಹತ್ತಿಸಿ ತೆರಳುವುದು. ಮತ್ತು ಖಾಸಗಿ ಬಸ್ ನಿಲ್ದಾಣವನ್ನು ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ವಾಹನ ನಿಲ್ಲಿಸಲು ಅನುವು ಮಾಡಿಕೊಡುವುದು. ಪಾರ್ಕಿಂಗ್ ವ್ಯವಸ್ಥೆ ಮಾಡಿರುವ ಸ್ಥಳ: ಎಫ್.ಎಂ.ಸಿ ಕಾಲೇಜು ಮೈದಾನ, ಸೆಂಟ್ ಜೋಸೆಫ್ ಕಾನ್ವೆಂಟ್ ಮೈದಾನ, ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣ, ಕ್ರಸೆಂಟ್ ಶಾಲಾ ಮೈದಾನ, ಹಿಂದುಸ್ಥಾನಿ ಶಾಲಾ ಮೈದಾನ, ಐಟಿಐ ಕಾಲೇಜು ಮೈದಾನ, ಶಾಂತಿ ಚರ್ಚ್ ಮೈದಾನ (ದ್ವಿ ಚಕ್ರ ಮೋಟಾರು ಸೈಕಲ್ ಮಾತ್ರ), ಮ್ಯಾನ್ಸ್ ಕಾಂಪೌಂಡ್, ಜೂನಿಯರ್ ಕಾಲೇಜು ಮೈದಾನ, ಹೊಸ ಖಾಸಗಿ ಬಸ್ಸು ನಿಲ್ದಾಣ. ಗೋಣಿಕೊಪ್ಪದಲ್ಲಿನ ವಿವರಗಳು: ಗೋಣಿಕೊಪ್ಪ ನಗರದ ಉಮಾ ಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್‌ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪೊನ್ನಂಪೇಟೆ ರಸ್ತೆ, ಬೈಪಾಸ್ ರಸ್ತೆ ಜಂಕ್ಷನ್‌ನಿಂದ ಐಪಿ ಜಂಕ್ಷನ್‌ವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆ ನಿಷೇಧಿಸಿದೆ. ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಬರುವ ವಾಹನಗಳು ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವಿರಾಜಪೇಟೆಗೆ ಹೋಗುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ- ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು- ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್- ಪಾಲಿಬೆಟ್ಟದ ಟಾಟಾ ಸ್ಟೋರ್ ಜಂಕ್ಷನ್- ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವುದು. ಕೇರಳದಿಂದ ಪೆರುಂಬಾಡಿ- ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳು ಪೆರುಂಬಾಡಿ-ವಿರಾಜಪೇಟೆ- ಅಮ್ಮತ್ತಿ- ಸಿದ್ದಾಪುರ ಮೂಲಕ ಹೋಗುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು- ಶ್ರೀಮಂಗಲ -ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು - ವಿರಾಜಪೇಟೆ- ಹಾತೂರು- ಕುಂದಾ- ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು- ಬಾಳಲೆ- ಪೊನ್ನಂಪೇಟೆ- ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು. ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವಿರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ- ಕುಂದಾ -ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವುದು. ಮೈಸೂರು- ತಿತಿಮತಿ- ಗೋಣಿಕೊಪ್ಪ- ಶ್ರೀಮಂಗಲ- ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ- ಕೋಣನಕಟ್ಟೆ-ಪೊನ್ನಪ್ಪಸಂತೆ- ನಲ್ಲೂರು- ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ಕುಟ್ಟ- ಶ್ರೀಮಂಗಲ -ಪೊನ್ನಂಪೇಟೆ- ಗೋಣಿಕೊಪ್ಪ- ಮೈಸೂರು ಕಡೆಗೆ ಹೋಗುವ ವಾಹನಗಳು, ಕುಟ್ಟ- ಶ್ರೀಮಂಗಲ, ಪೊನ್ನಂಪೇಟೆ, ನಲ್ಲೂರು, ಪೊನ್ನಪ್ಪಸಂತೆ, ಕೋಣನಕಟ್ಟೆ, ತಿತಿಮತಿ ಮಾರ್ಗವಾಗಿ ಸಂಚರಿಸುವುದು. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ ಬಾಳಲೆ ಕಡೆಗೆ ಹೋಗುವ ವಾಹನಗಳು ವಿರಾಜಪೇಟೆ- ಹಾತೂರು-ಕುಂದಾ- ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವುದು. ದಸರಾ ವೀಕ್ಷಿಸಲು ಬರುವ ಸಾರ್ವಜನಿಕರ ವಾಹನ ನಿಲುಗಡೆ ಸ್ಥಳಗಳು: ದಸರಾ ವೀಕ್ಷಣೆಗೆ ಗೋಣಿಕೊಪ್ಪಕ್ಕೆ ವಿರಾಜಪೇಟೆ ಕಡೆಯಿಂದ ಬರುವ ವಾಹನಗಳಿಗೆ- ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನ, ಪೊನ್ನಂಪೇಟೆ ಕಡೆಯಿಂದ ಬರುವ ವಾಹನಗಳಿಗೆ-ಗೋಣಿಕೊಪ್ಪ- ಪೊನ್ನಂಪೇಟೆ ರಸ್ತೆಯಲ್ಲಿರುವ ರುದ್ರಭೂಮಿಯ ಹಿಂದಕ್ಕೆ ಪೊನ್ನಂಪೇಟೆ ರಸ್ತೆಯ ಬದಿಯಲ್ಲಿ, ತಿತಿಮತಿ ಮತ್ತು ಬಾಳೆಲೆ ಕಡೆಯಿಂದ ಬರುವ ವಾಹನಗಳಿಗೆ- ಗೋಣಿಕೊಪ್ಪಲು ಆರ್.ಎಂ.ಸಿ. ಆವರಣದಲ್ಲಿ ಹಾಗೂ ಪಾಲಿಬೆಟ್ಟ ಕಡೆಯಿಂದ ಬರುವ ವಾಹನಗಳಿಗೆ- ಪಾಲಿಬೆಟ್ಟ ರಸ್ತೆಯಲ್ಲಿ ಶಾಸ್ತಾ ಇಂಡಸ್ಟ್ರೀಸ್‌ನಿಂದ ಅತ್ತೂರು ಕಡೆಗೆ ರಸ್ತೆಯ ಒಂದು ಬದಿಯಲ್ಲಿ ವಾಹನ ನಿಲುಗಡೆ ಮಾಡಲು ವ್ಯವಸ್ಥೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.