ಪತ್ರಕರ್ತರ ಸಂಘದದಲ್ಲಿ ನಾಳೆ ಡಿವಿಜಿ ಸಭಾಂಗಣ ಉದ್ಘಾಟನೆ

| Published : Sep 28 2025, 02:00 AM IST

ಪತ್ರಕರ್ತರ ಸಂಘದದಲ್ಲಿ ನಾಳೆ ಡಿವಿಜಿ ಸಭಾಂಗಣ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಡಿವಿಜಿ ಸಭಾಂಗಣದ ಉದ್ಘಾಟನೆಯು ಸೆಪ್ಟಂಬರ್ ೩೦ರ ಮಂಗಳವಾರ ಶಾಸಕ ಎಚ್.ಪಿ. ಸ್ವರೂಪ್ ಅವರು ನೆರವೇರಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ. ಎಚ್. ವೇಣುಕುಮಾರ್ ತಿಳಿಸಿದರು. ಈ ಸಮಾರಂಭದ ಕಾರ್ಯಕ್ರಮಕ್ಕೆ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಪತ್ರಿಕೆಯ ಎಲ್ಲಾ ಸಂಪಾದಕರು, ಎಲ್ಲಾ ವರದಿಗಾರರು, ಛಾಯಾಗ್ರಹಕರು, ಸಮಸ್ತ ಪತ್ರಕರ್ತರು ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮೇಲ್ಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಡಿವಿಜಿ ಸಭಾಂಗಣದ ಉದ್ಘಾಟನೆಯು ಸೆಪ್ಟಂಬರ್ ೩೦ರ ಮಂಗಳವಾರ ಶಾಸಕ ಎಚ್.ಪಿ. ಸ್ವರೂಪ್ ಅವರು ನೆರವೇರಿಸಲಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಕೆ. ಎಚ್. ವೇಣುಕುಮಾರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಸಂಘದ ಅಧ್ಯಕ್ಷರಾಗಿ ಸಿಕ್ಕಿರುವ ಅಲ್ಪಾವಧಿಯಲ್ಲಿ ನಮ್ಮ ಸಂಘದ ಎಲ್ಲಾ ಪದಾಧಿಕಾರಿಗಳು ಸೇರಿ ಸಾಧ್ಯವಾದಷ್ಟು ಜಿಲ್ಲಾ ಪತ್ರಕರ್ತರ ಸಂಘದ ಅಭಿವೃದ್ಧಿಗೆ ಶ್ರಮಿಸಿದ್ದು, ಈ ನಿಟ್ಟಿನಲ್ಲಿ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿಯಲ್ಲಿ ಸಭಾಂಗಣದ ಕಾಮಗಾರಿ ನಿರ್ವಹಿಸಲಾಗಿದೆ. ಇದೆ ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಡಿ.ವಿ.ಜಿ. ಸಭಾಂಗಣದ ಉದ್ಘಾಟನಾ ಸಮಾರಂಭ ಜರುಗಲಿದೆ. ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಟಿ.ಎ. ಶಿವಾನಂದ ತಗಡೂರು,ಆಶಯ ನುಡಿಯನ್ನು ರಾಜ್ಯ ಕಾರ್‍ಯಕಾರಿ ಸಮಿತಿ ಸದಸ್ಯ ಎಚ್.ಬಿ. ಮದನ್ ಗೌಡ ನಿರ್ವಹಿಸುವರು. ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್‍ಯನಿರ್ವಹಣಾಧಿಕಾರಿ ಡಾ. ಬಿ.ಆರ್. ಪೂರ್ಣಿಮಾ, ಜಿಲ್ಲಾ ವಾರ್ತಾಧಿಕಾರಿ ಮೀನಾಕ್ಷಮ್ಮ, ರಾಜ್ಯಕಾರ್ಯಕಾರಿ ವಿಶೇಷ ಆಹ್ವಾನಿತ ಸದಸ್ಯ ರವಿನಾಕಲಗೂಡು, ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸದಸ್ಯ ಕೆ.ಆರ್. ಮಂಜುನಾಥ್, ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿ ಸಂಸ್ಥಾಪಕ ಎಸ್.ಆರ್‌. ಪ್ರಸನ್ನಕುಮಾರ್, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತ ಸದಸ್ಯ ಬಾಳ್ಳುಗೋಪಾಲ್ ಇತರರು ಭಾಗವಹಿಸುವುದಾಗಿ ಹೇಳಿದರು.

ಈ ಸಮಾರಂಭದ ಕಾರ್ಯಕ್ರಮಕ್ಕೆ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಪತ್ರಿಕೆಯ ಎಲ್ಲಾ ಸಂಪಾದಕರು, ಎಲ್ಲಾ ವರದಿಗಾರರು, ಛಾಯಾಗ್ರಹಕರು, ಸಮಸ್ತ ಪತ್ರಕರ್ತರು ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಈ ಕಾರ್ಯಕ್ರಮದ ವೇಳೆ ಇಂಡಿಯಾನಾ ಆಸ್ಪತ್ರೆಯಿಂದ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೆ ಹೃದಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ತಪ್ಪದೇ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾಣ ಕಾರ್ಯದರ್ಶಿ ಬಿ.ಸಿ. ಶಶಿಧರ್, ಉಪಾಧ್ಯಕ್ಷ ಹರೀಶ್, ಕಾರ್ಯದರ್ಶಿ ಪಿ.ಎ. ಶ್ರೀನಿವಾಸ್, ನಿರ್ದೇಶಕರಾದ ನಾಗರಾಜು ಹೆತ್ತೂರ್, ಬಿ.ಆರ್. ಬೊಮ್ಮೇಗೌಡ ಇತರರು ಪಾಲ್ಗೊಂಡಿದ್ದರು.