ಡಿವೈಎಸ್ಪಿ ಗಣಪತಿ ಆತ್ಮಹತ್ಯೆ : ಜಾರ್ಜ್‌ಗೆ ಕ್ಲೀನ್‌ಚಿಟ್‌

| Published : Aug 28 2024, 12:53 AM IST

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ : ಜಾರ್ಜ್‌ಗೆ ಕ್ಲೀನ್‌ಚಿಟ್‌
Share this Article
  • FB
  • TW
  • Linkdin
  • Email

ಸಾರಾಂಶ

ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂಬ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್‌, ಪ್ರಕರಣದಲ್ಲಿ ಸಚಿವರಿಗೆ ಕ್ಲೀನ್ ಚಿಟ್ ನೀಡಿದೆ.

ಕನ್ನಡಪ್ರಭ ವಾರ್ತೆ ನವದೆಹಲಿಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂಬ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್‌, ಪ್ರಕರಣದಲ್ಲಿ ಸಚಿವರಿಗೆ ಕ್ಲೀನ್ ಚಿಟ್ ನೀಡಿದೆ.2016ರ ಜು.17ರಂದು ಡಿವೈಎಸ್ಪಿ ಗಣಪತಿ ಅವರು ಮಡಿಕೇರಿಯ ಲಾಡ್ಜ್ ವೊಂದರಲ್ಲಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ವಿಡಿಯೋದಲ್ಲಿ ಅಂದು ಗೃಹ ಸಚಿವರಾಗಿದ್ದ ಜಾರ್ಜ್‌ ಹೆಸರು ಪ್ರಸ್ತಾಪಿಸಿದ್ದರು. ತೀವ್ರ ವಿವಾದ ಹುಟ್ಟಿಸಿದ್ದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು. 2019ರಲ್ಲಿ ತನಿಖೆ ನಡೆಸಿದ್ದ ಸಿಬಿಐ, ಪ್ರಕರಣದಲ್ಲಿ ಜಾರ್ಜ್‌ ಪಾತ್ರವಿಲ್ಲ ಎಂದು ‘ಬಿ’ ರಿಪೋರ್ಟ್‌ ನೀಡಿತ್ತು. ಈ ತನಿಖಾ ವರದಿಯ ಆಧಾರದಲ್ಲಿ ಕರ್ನಾಟಕ ಹೈಕೋರ್ಟ್‌ ಕೂಡ ಜಾರ್ಜ್‌ ಅವರನ್ನು ಆರೋಪಮುಕ್ತಗೊಳಿಸಿತ್ತು.

ಹೈಕೋರ್ಟ್‌ ತೀರ್ಪು ಹಾಗೂ ಪ್ರಕರಣದಲ್ಲಿ ಜಾರ್ಜ್‌ ಗೆ ಕ್ಲೀನ್ ಚಿಟ್ ನೀಡಿದ್ದ ಸಿಬಿಐನ ಕ್ರಮ ಪ್ರಶ್ನಿಸಿ ಗಣಪತಿ ಸಹೋದರಿ ಸವಿತಾ ಅವರು ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಕ್ರಿಮಿನಲ್ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಮತ್ತು ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮ ಅವರನ್ನೊಳಗೊಂಡ ವಿಭಾಗೀಯ ಪೀಠ, ಹೈಕೋರ್ಟ್‌ ತೀರ್ಪನ್ನುಎತ್ತಿ ಹಿಡಿದಿದ್ದು, ಅರ್ಜಿಯನ್ನು ವಜಾಗೊಳಿಸಿದೆ.ಇದರಿಂದಾಗಿ ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಎಂಟು ವರ್ಷಕ್ಕೂ ಹೆಚ್ಚು ಕಾಲ ನಡೆದ ಕಾನೂನು ಸಂಘರ್ಷದಲ್ಲಿ ಸಚಿವ ಜಾರ್ಜ್‌ ಗೆ ಗೆಲುವು ದೊರಕಿದೆ.

ಈ ನೆಲದ ಕಾನೂನಿನ ಬಗ್ಗೆ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯ ಯಾವತ್ತೂ ಸತ್ಯದ ಪರವಾಗಿರುತ್ತದೆ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ. ನನ್ನ ವಿರುದ್ಧ ಮಾಡಿದ್ದ ಸುಳ್ಳು ಆರೋಪಗಳಿಂದ ನನಗೆ ಮುಕ್ತಿ ಸಿಕ್ಕಿದೆ ಎಂದು ಸಚಿವ ಕೆ.ಜೆ. ಜಾರ್ಜ್‌ ಪ್ರತಿಕ್ರಿಯಿಸಿದ್ದಾರೆ.