ರಂಜಾನ್ ಹಾಗೂ ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಸಮುದಾಯಕ್ಕೆ ಯುಗಾದಿ ಮತ್ತು ಮುಸ್ಲಿಂ ಸಮುದಾಯಕ್ಕೆ ರಂಜಾನ್ ಅತ್ಯಂತ ಪವಿತ್ರ ಹಬ್ಬಗಳಾಗಿವೆ. ಈ ಹಬ್ಬಗಳನ್ನು ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಮೂಲಕ ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ಹಬ್ಬದ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಈ ಬಾರಿ ಯುಗಾದಿ ಮತ್ತು ರಂಜಾನ್ ಹಬ್ಬಗಳು ದಿನ ಬಿಟ್ಟು ದಿನ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಹಾಗೂ ಶಾಂತಿಯುತವಾಗಿ ಹಬ್ಬಗಳನ್ನು ಆಚರಿಸಬೇಕು ಎಂದು ಡಿವೈಎಸ್‌ಪಿ ಗೋಪಿ ಕರೆ ನೀಡಿದರು.ನಗರ ಪೊಲೀಸ್ ಠಾಣೆ ಸಭಾಂಗಣದಲ್ಲಿ ರಂಜಾನ್ ಹಾಗೂ ಯುಗಾದಿ ಹಬ್ಬಗಳ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ಹಿಂದೂ ಸಮುದಾಯಕ್ಕೆ ಯುಗಾದಿ ಮತ್ತು ಮುಸ್ಲಿಂ ಸಮುದಾಯಕ್ಕೆ ರಂಜಾನ್ ಅತ್ಯಂತ ಪವಿತ್ರ ಹಬ್ಬಗಳಾಗಿವೆ. ಈ ಹಬ್ಬಗಳನ್ನು ಎಲ್ಲರೂ ಸಂಭ್ರಮ ಹಾಗೂ ಸಡಗರದಿಂದ ಆಚರಿಸುವ ಮೂಲಕ ಪರಸ್ಪರ ಸಾಮರಸ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಿಡಿಗೇಡಿಗಳು ಹರಡುವ ವದಂತಿಗಳಿಗೆ ಕಿವಿಗೊಡದೆ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಿಕೊಳ್ಳಬೇಕು. ಹಬ್ಬದ ಸಂದರ್ಭಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಕೃಷ್ಣಕುಮಾರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಶೇಖರ್, ವಿಶ್ವ ಹಿಂದೂ ಪರಿಷತ್ ಮುಖಂಡ ಅರುಣ್, ಜಮಾತ್ ಕಮಿಟಿ ಅಧ್ಯಕ್ಷ ಅಪ್ರೋಸ್ ಪಾಷಾ, ಜಮೀಲ್ ಸೇರಿದಂತೆ ಹಲವರು ಮಾತನಾಡಿದರು.ಈ ಸಂದರ್ಭದಲ್ಲಿ ಸಬ್‌ಇನ್ಸ್ಪೆಕ್ಟರ್‌ ದಿಲೀಪ್ ಕುಮಾರ್‌, ನಗರಸಭೆ ಮಾಜಿ ಸದಸ್ಯ ದರ್ಶನ್, ಕರವೇ ಮುಖಂಡ ಹೇಮಂತ್, ಎರಡೂ ಸಮಾಜದ ಮುಖಂಡರಾದ ಚೇತನ್ ಜೈನ್, ಸುರೇಶ್, ಅಜ್ಜಯ್ಯ, ರಿಯಾಜ್, ಸೈಯದ್ ನವಾಜ್ ಸೇರಿದಂತೆ ಅನೇಕರು ಸಭೆಯಲ್ಲಿ ಭಾಗವಹಿಸಿದ್ದರು.