ಡಿವೈಎಸ್ಪಿ ನಂದಗಾಂವಿ ರೌಡಿಗಳ ಪರೇಡ್‌

| Published : Apr 08 2025, 12:30 AM IST

ಸಾರಾಂಶ

ಬಸವನಬಾಗೇವಾಡಿ: ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸೋಮವಾರ ಬಸವನಬಾಗೇವಾಡಿ ಉಪವಿಭಾಗದ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ, ಕೂಡಗಿ, ತಾಳಿಕೋಟಿ, ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ಪೆರೇಡ್‌ನಲ್ಲಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಸರಿಯಾಗಿ ಕ್ಲಾಸ್ ತೆಗೆದುಕೊಂಡರು.

ಬಸವನಬಾಗೇವಾಡಿ:

ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ಸೋಮವಾರ ಬಸವನಬಾಗೇವಾಡಿ ಉಪವಿಭಾಗದ ಬಸವನಬಾಗೇವಾಡಿ, ನಿಡಗುಂದಿ, ಕೊಲ್ಹಾರ, ಕೂಡಗಿ, ತಾಳಿಕೋಟಿ, ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್‌ಗಳ ಪೆರೇಡ್‌ನಲ್ಲಿ ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಸರಿಯಾಗಿ ಕ್ಲಾಸ್ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ತೊಂದರೆ ಉಂಟುಮಾಡದೇ ಸರಿಯಾದ ಜೀವನವನ್ನು ರೌಡಿಶೀಟರ್‌ಗಳು ಅಳವಡಿಸಿಕೊಳ್ಳಬೇಕು. ಒಂದು ವೇಳೆ ಏನಾದರೂ ಕೃತ್ಯಗಳನ್ನು ಮಾಡಿದರೆ ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಬಾರದು. ಸಮಾಜದಲ್ಲಿ ಸಾಮರಸ್ಯದೊಂದಿಗೆ ಜೀವನ ಮಾಡಬೇಕು. ಕೆಲ ರೌಡಿಶೀಟರ್‌ಗಳಿಗೆ ಹಬ್ಬಗಳಲ್ಲಿ ಭಾಗವಹಿಸದಂತೆ ಕಟ್ಟುನಿಟ್ಟಾಗಿ ಹೇಳಿರುತ್ತೇವೆ. ಸಮಾಜದಲ್ಲಿ ಅಶಾಂತಿ ಉಂಟುಮಾಡುವ ಘಟನೆಗೆ ಕಾರಣವಾದರೆ ಅಂತಹವರ ಮೇಲೆ ಕಾನೂನು ಕ್ರಮ ತೆಗೆದುಕೊಂಡು ಗಡಿಪಾರು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.ಪರೇಡ್‌ನಲ್ಲಿ ಕೊಲೆ, ದರೋಡೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಒಟ್ಟು ೫೮ ಜನ ರೌಡಿಶೀಟರ್‌ಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಬಸವನಬಾಗೇವಾಡಿಯ ಪಿಐ ಗುರುಶಾಂತ ದಾಶ್ಯಾಳ, ಮುದ್ದೇಬಿಹಾಳ ಸಿಪಿಐ ಮೊಹಮ್ಮದ ಫಸಿಯುದ್ದೀನ್‌, ನಿಡಗುಂದಿ ಸಿಪಿಐ ಅಶೋಕ ಚವ್ಹಾಣ, ಕೂಡಗಿ ಪಿಎಸ್‌ಐ ಮಿನಾಕ್ಷಿ ಕುಲಕರ್ಣಿ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ, ನಿಡಗುಂದಿ ಪಿಎಸ್‌ಐ ಶಿವಾನಂದ ಪಾಟೀಲ, ಕೊಲ್ಹಾರ ಪಿಎಸ್‌ಐ ಎಂ.ಬಿ.ಬಿರಾದಾರ, ತಾಳಿಕೋಟಿ ಪಿಎಸ್‌ಐ ರಾಮನಗೌಡ ಸಂಕನಾಳ, ಮುದ್ದೇಬಿಹಾಳ ಪಿಎಸ್‌ಐ ಸಂಜಯ ತಿಪ್ಪಾರೆಡ್ಡಿ, ಪಿಎಸ್‌ಐ ಯತೀಶ.ಕೆ.ಎನ್ ಇತರರು ಇದ್ದರು.