ನ್ಯಾಮತಿ ಪಪಂ ಕಚೇರಿಯಲ್ಲಿ ಇ-ಖಾತಾ ಸಹಾಯವಾಣಿ ಕೇಂದ್ರ

| Published : Feb 26 2025, 01:02 AM IST

ಸಾರಾಂಶ

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾಗಳನ್ನು ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ನ್ಯಾಮತಿಯಲ್ಲಿ ತಿಳಿಸಿದ್ದಾರೆ.

ನ್ಯಾಮತಿ: ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾಗಳನ್ನು ಪಡೆಯಲು ಸಾರ್ವಜನಿಕರ ಅನುಕೂಲಕ್ಕಾಗಿ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ತೆರೆದಿರುವುದಾಗಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ತಿಳಿಸಿದ್ದಾರೆ.

ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಇ-ಖಾತಾ ಕರಪತ್ರಗಳನ್ನು ಪ್ರದರ್ಶಿಸಿ ಅವರು ಮಾತನಾಡಿದರು. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆಗಳಿಗೆ ಬಿ-ಖಾತೆ ಪಡೆಯುವ ಕುರಿತು ಈಗಾಗಲೇ ಧ್ವನಿವರ್ಧಕದ ಮೂಲಕ, ಕರಪತ್ರ ಮತ್ತು ಬ್ಯಾನರ್‌ಗಳನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತಿದೆ ಎಂದರು.

ಸರ್ಕಾರವು ಸೆಪ್ಟೆಂಬರ್‌ ತಿಂಗಳವರೆಗೂ ಸಮಯ ನಿಗದಿ ಮಾಡಿದೆ. ಅನಧಿಕೃತ ಕಟ್ಟಡ, ನಿವೇಶನ, ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿದೆ. ಈ ಅವಕಾಶವನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನಧಿಕೃತ ನಿವೇಶನ ಹೊಂದಿರುವ ಭೂ ಮಾಲೀಕರು ಅಗತ್ಯ ದಾಖಲೆಗಳಾದ ಭೂ ಪರಿವರ್ತನೆ ಆದೇಶ, ಬಡಾವಣೆ ನಕ್ಷೆ, ಸ್ವತ್ತಿನ ಮಾಲೀಕತ್ವ ದೃಢಿಕರಿಸುವ ದಾಖಲೆ, ಗುರುತಿನ ಪತ್ರಗಳೊಂದಿಗೆ ನ್ಯಾಮತಿ ಪಟ್ಟಣ ಪಂಚಾಯಿತಿ ವಿಶೇಷ ಇ-ಖಾತಾ ಹೆಲ್ಪ್‌ಡೆಸ್ಕ್‌ ಮತ್ತು ಸಹಾಯವಾಣಿ ಕೇಂದ್ರವನ್ನು ಸಪರ್ಕಿಸುವಂತೆ ತಿಳಿಸಿದ್ದಾರೆ.

- - - (-ಫೋಟೋ):